ಲಕ್ನೋ: ಹೊಸ ವರ್ಷದಂದು ದೆಹಲಿಯಲ್ಲಿ ಯುವತಿಯನ್ನು ಕಾರೊಂದು ಹಲವು ಕಿ.ಮೀ. ವರೆಗೆ ಎಳೆದುಕೊಂಡು ಹೋಗಿ, ಆಕೆಯ ಸಾವಿಗೆ ಕಾರಣವಾಗಿರುವ ಘಟನೆಯ ಬಳಿಕ ಇಂತಹ ಹಲವು ಪ್ರಕರಣಗಳು ನಡೆಯುತ್ತಿರುವುದು ಬೆಳಕಿಗೆ ಬರುತ್ತಲೇ ಇದೆ. ಇದೀಗ ಬಸ್ಸೊಂದು (Bus) ಹಲವು ವಾಹನಗಳಿಗೆ ಡಿಕ್ಕಿ ಹೊಡೆದು, ಕಾರನ್ನು (Car) 3 ಕಿ.ಮೀ ವರೆಗೆ ದೂಡಿಕೊಂಡು ಹೋಗಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ (Uttar Pradesh) ಮೀರತ್ನಲ್ಲಿ (Meerut) ಹಿಟ್ ಆಂಡ್ ಡ್ರ್ಯಾಗ್ (Hit and Drag) ಘಟನೆ ನಡೆದಿದೆ. ವರದಿಗಳ ಪ್ರಕಾರ, ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಬಳಿಕ ಬಸ್ 3 ಕಿ.ಮೀ ವರೆಗೆ ಕಾರನ್ನು ದೂಡಿಕೊಂಡೇ ಹೋಗಿದೆ. ಅಪಘಾತದ ವೇಳೆ ಕಾರಿನಲ್ಲಿ 4-5 ಜನರಿದ್ದು, ಅದೃಷ್ಟವಶಾತ್ ಅವರೆಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ.
Advertisement
Truck driver’s revenge after men in car allegedly Insulted him – Meerut, UP.pic.twitter.com/u7Ls4Y6FAH
— Mihir Jha (@MihirkJha) February 12, 2023
Advertisement
ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋವೊಂದು ಕಾಣಿಸಿಕೊಂಡಿದೆ. ಬಸ್ ಕಾರನ್ನು ದೂಡಿಕೊಡು ಹೋಗುತ್ತಿದ್ದಾಗ ಅದು ಇನ್ನೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಸ್ ಚಾಲಕ ಅಲ್ಲಿಂದ ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದ್ದು, ಆದರೂ ಆತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಇದನ್ನೂ ಓದಿ: Aero India-2023 ಏರ್ಶೋಗೆ ಪ್ರಧಾನಿ ಮೋದಿ ಅದ್ಧೂರಿ ಚಾಲನೆ
Advertisement
ಬಸ್ ಚಾಲಕನನ್ನು ಅಮಿತ್ ಎಂದು ಗುರುತಿಸಲಾಗಿದ್ದು, ಆತ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಆತ ಕೇವಲ ಒಂದು ಕಾರನ್ನು ಎಳೆದುಕೊಂಡು ಹೋಗದೇ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಕಾರಲ್ಲಿದ್ದ ಪ್ರಯಾಣಿಕನೊಬ್ಬ ಮಾಹಿತಿ ನೀಡಿದ್ದಾನೆ.
Advertisement
ಇದೀಗ ಬಸ್ ಚಾಲಕನನ್ನು ಪೊಲೀಸರು ಸ್ಥಳದಲ್ಲಿಯೇ ಬಂಧಿಸಿದ್ದು, ಬಸ್ ಅನ್ನು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಹುಲಿ ದಾಳಿಗೆ ಕಾರ್ಮಿಕ ಯುವಕ ಬಲಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k