ಬೆಂಗಳೂರು: ತಮಿಳುನಾಡು ಮೂಲದ ಬಸ್, ಬೈಕಿಗೆ ಡಿಕ್ಕಿಯಾದ ಪರಿಣಾಮ ಸವಾರನೋರ್ವ ಮೃತಪಟ್ಟಿದ್ದಾನೆ. ಈ ಘಟನೆ ನಗರದ ಮೈಸೂರು ಫ್ಲೈಓವರ್ ಮೇಲೆ ಇಂದು ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ನಡೆದಿದೆ.
ಒಂದೇ ಬೈಕಿನಲ್ಲಿ ಮೂವರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬಸ್, ಬೈಕಿಗೆ ಡಿಕ್ಕಿಯಾಗಿ ಸವಾರರು ಬಿದ್ದಿದ್ದಾರೆ. ಈ ವೇಳೆ ಬಸ್ ಓರ್ವನ ತಲೆಯ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತನನ್ನು ಸಂಶಿ ಎಂದು ಗುರುತಿಸಲಾಗಿದೆ. ಸಂಶಿ ಬೈಕ್ ಹಿಂಬದಿಯಲ್ಲಿ ಕುಳಿತಿದ್ದರು.
ಇನ್ನಿಬ್ಬರು ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕೆ ಆರ್ ಮಾರುಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.