Shivamogga | ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ – ಇಬ್ಬರು ದುರ್ಮರಣ, 13ಕ್ಕೂ ಹೆಚ್ಚು ಮಂದಿಗೆ ಗಾಯ

Public TV
1 Min Read
Shivamogga Bus Accident

ಶಿವಮೊಗ್ಗ: ಕೆಟ್ಟು ನಿಂತಿದ್ದ ಲಾರಿಗೆ (Lorry) ಬಸ್ (Bus) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶಿವಮೊಗ್ಗದ (Shivamogga) ತೀರ್ಥಹಳ್ಳಿ (Thirthahalli) ರಸ್ತೆಯಲ್ಲಿ ನಡೆದಿದೆ.

ಶಿವಮೊಗ್ಗ ತಾಲೂಕಿನ ಗಾಜನೂರು ಅಗ್ರಹಾರದ ಬಳಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್ ಕಂಡಕ್ಟರ್ ಅಣ್ಣಪ್ಪ (40), ಪ್ರಯಾಣಿಕರಾದ ಹರ್ಷಿತ (35) ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ 13ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಉಮೇಶ್ (50), ಪ್ರಸಾದ್ (40), ವಿಷ್ಣು (21), ಮಂಜುನಾಥ್ (45), ಸುಜಾತ (40), ಆನಂದ್ ನಾಯ್ಕ್ (50), ನೀಲಾಂಬಿಕಾ (45), ಪ್ರಸಾದ್ (43), ಬಿಂದು (20), ಶಂಶಾಂಕ್ (20), ಲಕ್ಷ್ಮೀ (35), ಶ್ರೀರಾಮುಲು (42) ಹಾಗೂ ಕಾರ್ತಿಕ್ (32) ಎಂಬವರು ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಡಾ.ರಾಜ್ ಅಪಹರಣ ಪ್ರಕರಣಕ್ಕೆ 25 ವರ್ಷ – 2000 ಇಸವಿಯಲ್ಲಿ ಅಪಹರಿಸಿದ್ದ ವೀರಪ್ಪನ್

ದುರ್ಗಾಂಬ ಬಸ್ ಮಂಗಳೂರಿನಿಂದ ಚಳ್ಳಕೆರೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಪ್ರಯಾಣಿಕರಿಗೆ ಟಿಕೆಟ್ ಕೊಡದೇ ಮೊಬೈಲ್‌ನಲ್ಲಿ ಹರಟೆ ಹೊಡೆಯುತ್ತಿದ್ದ ರೈಲ್ವೆ ಸಿಬ್ಬಂದಿ ಅಮಾನತು

Share This Article