ಹಾವೇರಿ: ಬ್ಯಾಡಗಿ ತಾಲೂಕಿನ ಛತ್ರದ ಬಳಿ ಪ್ರವಾಸಿಗರಿದ್ದ ಬಸ್ (Bus), ಲಾರಿಗೆ ಡಿಕ್ಕಿ (Accident) ಹೊಡೆದ ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಪ್ರವಾಸಕ್ಕೆ ಬಂದಿದ್ದ ಬಸ್ ಬೆಂಗಳೂರಿನಿಂದ ಮಹಾರಾಷ್ಟ್ರಕ್ಕೆ (Maharashtra) ವಾಪಸ್ ಆಗುತ್ತಿತ್ತು. ಈ ವೇಳೆ ಛತ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಲಾರಿಗೆ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ತಂಗಿಯ ಮದುವೆಗೆ ತೆರಳುವಾಗ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ – ಯುವಕ ದುರ್ಮರಣ
ಬಸ್ ಚಾಲಕ ನಿದ್ರೆಯ ಮಂಪರಿನಲ್ಲಿದ್ದಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪತ್ನಿ ಎದುರೇ ಉದ್ಯಮಿ ಹತ್ಯೆ ಕೇಸ್ – ಮಗನ ಕೈಗೆ ಮಚ್ಚು ಕೊಟ್ಟು ಕಳುಹಿಸಿ ಹತ್ಯೆ ಮಾಡಿಸಿದ ತಂದೆ
