ಹಾಸನ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ (Bus) ಶಾಲೆಯ (School) ಕಾಂಪೌಂಡ್ ಹಾಗೂ ಮನೆಗೆ ಡಿಕ್ಕಿ ಹೊಡೆದು ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದಲ್ಲಿ ನಡೆದಿದೆ.
ಚನ್ನರಾಯಪಟ್ಟಣ (Channarayapatna) ತಾಲೂಕಿನ ಉದಯಪುರ ಗ್ರಾಮದ ಅಮೃತ್‌ರಾಜ್ (34) ಸಾವನ್ನಪ್ಪಿದ ವ್ಯಕ್ತಿ. ಬೆಂಗಳೂರಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. (KSRTC) ಬಸ್‌ನ ಆಕ್ಸಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ ಜಮೀನಿಗೆ ನುಗ್ಗಿದೆ. ಬಳಿಕ ಮನೆಗೆ ಡಿಕ್ಕಿ ಹೊಡೆದು ಶಾಲೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ರಾಜ್ಯಾದ್ಯಂತ ಟ್ಯಾಕ್ಸಿಗಳಿಗೆ ಏಕರೂಪದ ದರ ನಿಗದಿ – ಪ್ರತಿ ಕಿಮೀಗೆ 24 ರಿಂದ 28 ರೂ.ವರೆಗೆ ಏರಿಕೆಗೆ ಅವಕಾಶ
Advertisement
Advertisement
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ವ್ತಕ್ತಿ ಸಾವನ್ನಪ್ಪಿದ್ದಾನೆ. 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: 1 ಕಿ.ಮಿಗೆ 1.59 ಲಕ್ಷ, ದಿನಕ್ಕೆ 50 ಲಕ್ಷ – ಭಾರತ್ ಜೋಡೋ ಯಾತ್ರೆಗೆ ಬರೋಬ್ಬರಿ 71 ಕೋಟಿ ಖರ್ಚು
Advertisement
Advertisement
ಜಮೀನಿನಲ್ಲಿದ್ದ ವಾಸದ ಮನೆಗೂ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಅರ್ಧ ಭಾಗ ಕುಸಿದು ಬಿದ್ದಿದೆ. ಶಾಲೆಯ ಕಾಂಪೌಂಡ್ ಜಖಂಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪೊಲೀಸರ ಮೇಲೆ ಹಲ್ಲೆ – ಕಾಂಗ್ರೆಸ್ ಮಾಜಿ ಶಾಸಕನ ಪುತ್ರ ಅರೆಸ್ಟ್
ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸಾಮೂಹಿಕ ವಿವಾಹದಲ್ಲಿ ಗೋಲ್ಮಾಲ್ – ಹಣಕ್ಕೆ ದಂಪತಿಯಾದ ಜೋಡಿಗಳು, 15 ಮಂದಿ ಸೇರಿ ಇಬ್ಬರು ಅಧಿಕಾರಿಗಳ ಬಂಧನ