ಸೋಫಿಯಾ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್‍ವೊಂದು ಇಂದು ಅಪಘಾತಕ್ಕೀಗೀಡಾಗಿದ್ದು 45 ಮಂದಿ ಮೃತಪಟ್ಟಿದ್ದಾರೆ.
ಉತ್ತರ ಮೆಸಡೋನಿಯಾದತ್ತ ಹೊರಟಿದ್ದ ಬಸ್‍ವೊಂದು ಅಪಘಾತಕ್ಕೀಗೀಡಾಗಿದ್ದು, ಇದರಲ್ಲಿ 12 ಮಕ್ಕಳು ಸೇರಿದಂತೆ 45 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ಇದನ್ನೂ ಓದಿ: ಕ್ರಿಪ್ಟೋ ಕರೆನ್ಸಿ ನಿಷೇಧದ ಬದಲು ನಿಯಂತ್ರಣ
Advertisement
Advertisement
ಟರ್ಕಿಯಿಂದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಹೆದ್ದಾರಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಳಿಕ ಬಸ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯು ಬಲ್ಗೇರಿಯಾದ ಪಶ್ಚಿಮ ಭಾಗದಲ್ಲಿ ನಡೆದಿದೆ. ಈ ಅವಘಡದಲ್ಲಿ ಗಾಯಗೊಂಡ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕ್ರಿಪ್ಟೋಕರೆನ್ಸಿ ವಿಚಾರದಲ್ಲಿ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು: ಮೋದಿ ಕರೆ