ಚಂಡೀಗಢ: ಸರ್ಕಾರಿ ಬಸ್ ಫ್ಲೈಓವರ್ನ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಮೃತಪಟ್ಟಿದ್ದು, 24 ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್ನ (Punjab) ಸಂಗ್ರೂರ್ (Sangrur) ಜಿಲ್ಲೆಯಲ್ಲಿ ನಡೆದಿದೆ.
ಬಸ್ ಪ್ರಯಾಣಿಕರನ್ನು ಹೊತ್ತು ಚಂಡೀಗಢಕ್ಕೆ ತೆರಳುತ್ತಿತ್ತು. ಸಂಗ್ರೂರ್ ಜಿಲ್ಲೆಯ ಧುರಿಯಿಂದ ಚಂಡೀಗಢದತ್ತ ಪೆಪ್ಸು ರಸ್ತೆ ಸಾರಿಗೆ ನಿಗಮದ ಬಸ್ ಪ್ರಯಾಣಿಸುತ್ತಿದ್ದಾಗ ಮುಂಜಾನೆ ಸುಮಾರು 4:30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಬಸ್ ಫ್ಲೈಓವರ್ನ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಹಾನಿಯಾಗಿದ್ದು, ಹಲವು ಪ್ರಯಾಣಿಕರು ಬಸ್ನೊಳಗೆ ಸಿಲುಕಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ CRPF ಶಿಬಿರದ ಮೇಲೆ ಉಗ್ರರಿಂದ ಗುಂಡಿನ ದಾಳಿ; ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ
ರಕ್ಷಣಾ ತಂಡಗಳು ಸ್ಥಳೀಯ ನಿವಾಸಿಗಳು ಹಾಗೂ ದಾರಿಹೋಕರ ಸಹಾಯದೊಂದಿಗೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಗಾಯಾಳುಗಳನ್ನು ಅಂಬುಲೆನ್ಸ್ಗಳ ಮೂಲಕ ಸಮೀಪದ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಇದನ್ನೂ ಓದಿ: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಮಡಿಕೇರಿಯ ಯುವಕ ಯೋಗೇಶ್
ಸಂಗ್ರೂರ್ ಸಿವಿಲ್ ಆಸ್ಪತ್ರೆಯ ವೈದ್ಯರ ಪ್ರಕಾರ, ಅಪಘಾತದ ಬಳಿಕ ಆರಂಭದಲ್ಲಿ 21 ಗಾಯಾಳುಗಳನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಅವರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 10ರಿಂದ 15 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಟಿಯಾಲದ ರಾಜೀಂದ್ರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಮದರ್ ಡೈರಿ ಹಾಲಿನ ದರ ಲೀ.ಗೆ 4 ರೂ.ವರೆಗೆ ಏರಿಕೆ – ನ.12ರಿಂದ ಹೊಸ ದರ ಜಾರಿ
ಉಳಿದ ಗಾಯಾಳುಗಳಿಗೆ ಸಂಗ್ರೂರ್ನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಆರೋಗ್ಯ ಸ್ಥಿತಿಯನ್ನು ಗಮನಿಸಲು ಸ್ಕ್ಯಾನ್ ಸೇರಿದಂತೆ ಇತರ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಕೆಲವರ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಒಲಂಪಿಕ್ ಕ್ರೀಡಾಪಟು ಸೋಮಯ್ಯ ಮನೆಯಲ್ಲಿ ಚಿನ್ನದ ಪದಕಗಳ ಕಳ್ಳತನ ಕೇಸ್ – ಇಬ್ಬರ ಬಂಧನ
ಅಪಘಾತ ಸಂಭವಿಸಿದ ಸಮಯದಲ್ಲಿ ಹವಾಮಾನ ಪರಿಸ್ಥಿತಿ ಸ್ಪಷ್ಟವಾಗಿತ್ತು ಹಾಗೂ ಪ್ರದೇಶದಲ್ಲಿ ಮಂಜು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆ ಮತ್ತು ಪ್ರಯಾಣಿಕರ ಹೇಳಿಕೆಗಳ ಪ್ರಕಾರ, ಬಸ್ ಅತಿವೇಗದಲ್ಲಿ ಚಲಿಸುತ್ತಿತ್ತು. ಈ ವೇಳೆ ಚಾಲಕ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿರುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ದೀಪಾವಳಿ ಪಾರ್ಟಿಯಲ್ಲಿ ನಾನ್ವೆಜ್ – ಪ್ರಿಯಾಂಕಾ ಚೋಪ್ರಾ ವಿರುದ್ಧ ನೆಟ್ಟಿಗರು ಗರಂ
ಅಪಘಾತಕ್ಕೆ ನಿಖರವಾದ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ತನಿಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವಿವರವಾದ ತನಿಖೆ ಆರಂಭಿಸಲಾಗಿದೆ. ಇದನ್ನೂ ಓದಿ: ಪಟಾಕಿ ಸಿಡಿಸುವುದರಲ್ಲಿ ದೊಡ್ಡ ವಿಷಯವೇನಿಲ್ಲ: ಯೋಗಿ ಆದಿತ್ಯನಾಥ್ ಸಮರ್ಥನೆ
ಸಿಎಂ ಸಂತಾಪ:
ಅಪಘಾತದಲ್ಲಿ ಜೀವಹಾನಿಯಾಗಿರುವುದಕ್ಕೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಅಸಲಿ ಹಣದ ಬದಲಿಗೆ ಮಕ್ಕಳ ಆಟಿಕೆ ನೋಟುಗಳನ್ನಿಟ್ಟು ಮೋಸಕ್ಕೆ ಸ್ಕೆಚ್ – ಡೀಲ್ ವೇಳೆ ಸಿಸಿಬಿ ದಾಳಿ
ಸಂಗ್ರೂರ್ನಲ್ಲಿ ಪಿಆರ್ಟಿಸಿ ಬಸ್ ಅಪಘಾತಕ್ಕೀಡಾದ ಸುದ್ದಿ ತೀವ್ರ ದುಃಖ ತಂದಿದೆ. ಈ ಅಪಘಾತದಲ್ಲಿ ಮೂರು ಅಮೂಲ್ಯ ಜೀವಗಳು ಬಲಿಯಾಗಿವೆ. ಗಾಯಗೊಂಡ 24 ಮಂದಿಯಲ್ಲಿ 15 ಜನರನ್ನು ಪಟಿಯಾಲಕ್ಕೆ ಸ್ಥಳಾಂತರಿಸಲಾಗಿದೆ. ಸಂತ್ರಸ್ತರೆಲ್ಲರಿಗೂ ಉಚಿತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಆಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ವಿದ್ಯುಕ್ತ ತೆರೆ – ಗರ್ಭಗುಡಿ ಬಾಗಿಲು ಬಂದ್, ಜಾತ್ರಾ ಮಹೋತ್ಸವ ಸಂಪನ್ನ

