ಬ್ಯಾಂಕಾಕ್: ಥಾಯ್ಲೆಂಡ್‌ನಲ್ಲಿ (Thailand) ಬಸ್ (Bus) ಒಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 14 ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ. ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ದೇಶದ ಪಶ್ಚಿಮ ಪ್ರಾಂತ್ಯದ ಪ್ರಚುವಾಪ್ ಖಿರಿ ಖಾನ್‌ನಲ್ಲಿ ಮಧ್ಯರಾತ್ರಿ ವೇಳೆ ಭೀಕರ ಅಪಘಾತ (Accident) ಸಂಭವಿಸಿದೆ. ಅಪಘಾತದ ಭೀಕರತೆಗೆ ಬಸ್ ಅರ್ಧಭಾಗದಷ್ಟು ನಜ್ಜುಗುಜ್ಜಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ರಕ್ಷಣಾ ಸಿಬ್ಬಂದಿ ಪ್ರಯಾಣಿಕರನ್ನು ಅವಶೇಷಗಳಿಂದ ಹೊರತೆಗೆಯುತ್ತಿರುವುದು ವೀಡಿಯೋಗಳಲ್ಲಿ ಕಂಡುಬಂದಿದೆ. ಇದನ್ನೂ ಓದಿ: ನಡೆದು ಹೋಯ್ತಾ ಮಹಾ ಪ್ರಮಾದ – ಗುರಿ ತಪ್ಪಿ ಬಿದ್ದ ಗುಂಡೇಟಿನಿಂದ ಅರ್ಜುನ ಸಾವು?
ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಕಾರಣಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: Rain Alert: ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲೂ ಭಾರೀ ಮಳೆ ಸಾಧ್ಯತೆ