Connect with us

Districts

ಚಾಲಕನ ನಿಯಂತ್ರಣ ತಪ್ಪಿ ಜೋಳದ ಹೊಲಕ್ಕೆ ಉರುಳಿದ ಸಾರಿಗೆ ಬಸ್

Published

on

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ರಸ್ತೆಯಿಂದ ಜೋಳದ ಹೊಲಕ್ಕೆ ಉರುಳಿದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಚೌಡೇನಹಳ್ಳಿ ನಡೆದಿದೆ.

ಬಸ್ ಹಾಸನದಿಂದ ಬೆಂಗಳೂರಿಗೆ ಹೊರಟಿತ್ತು. ಚಾಲಕ ಬಸ್ ಇಳಿಜಾರಿನಲ್ಲಿ ನ್ಯೂಟ್ರಲ್ ಮಾಡಿಕೊಂಡು ಹೋಗುತ್ತಿದ್ದನು. ಈ ವೇಳೆ ಬಸ್ ನಿಯಂತ್ರಣಕ್ಕೆ ಸಿಗದೇ ರಸ್ತೆಯಿಂದ ಜೋಳದ ಹೊಲಕ್ಕೆ ಉರುಳು ಬಿದ್ದಿದೆ. ಈ ಬಸ್ ಹಾಸನದ ಡಿಪೋಗೆ ಸೇರಿದೆ.

10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಚನ್ನರಾಯಪಟ್ಟಣ ಹಾಗೂ ಉದಯಪುರ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎನ್ನುವ ಮಾತುಗಳು ಕೇಳಿ ಬಂದಿದೆ. ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *