ಇಸ್ಲಾಮಾಬಾದ್: 48 ಜನ ಪ್ರಯಾಣಿಕರಿದ್ದ ಬಸ್ (Bus) ಒಂದು ಕಂದಕಕ್ಕೆ ಉರುಳಿ 40 ಜನರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ (Pakistan) ಬಲೂಚಿಸ್ತಾನದಲ್ಲಿ (Balochistan) ನಡೆದಿದೆ.
ಭಾನುವಾರ ಬೆಳಗ್ಗೆ ಈ ಭೀಕರ ಅಪಘಾತ ಬಲೂಚಿಸ್ತಾನದ ಲಾಸ್ಬೆಲಾದಲ್ಲಿ (Lasbela) ನಡೆದಿದೆ. ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬಸ್ ಕ್ವೆಟ್ಟಾದಿಂದ ಕರಾಚಿಗೆ ತೆರಳುತ್ತಿತ್ತು ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
Advertisement
Advertisement
ವೇಗವಾಗಿ ಚಲಿಸುತ್ತಿದ್ದ ಬಸ್ ಲಾಸ್ಬೆಲಾದಲ್ಲಿ ಸೇತುವೆಯೊಂದರ ಪಿಲ್ಲರ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಅದು ಕಂದಕಕ್ಕೆ ಉರುಳಿದೆ. ಈ ವೇಳೆ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, 40 ಜನರ ಸಾವಿಗೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.
Advertisement
ಭೀಕರ ಅಪಘಾತದಲ್ಲಿ ಬದುಕುಳಿದವರಲ್ಲಿ ಹೆಚ್ಚಿನವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಕಾರಣದ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಸಾವನ್ನಪ್ಪಿದವರ ಮೃತದೇಹಗಳು ವಿರೂಪಗೊಂಡಿದ್ದು, ಅವರ ಗುರುತು ಪತ್ತೆ ಹಚ್ಚಲು ಡಿಎನ್ಎ ಪರೀಕ್ಷೆ ನಡೆಸಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: IAF Jets Crashː ವಾಯುಸೇನಾ ವಿಮಾನಗಳು ಪತನ – ಬ್ಲ್ಯಾಕ್ ಬಾಕ್ಸ್ ಪತ್ತೆ
Advertisement
ಪಾಕಿಸ್ತಾನದ ಹೆಚ್ಚಿನ ಹೆದ್ದಾರಿಗಳು ವೈಜ್ಞಾನಿಕವಲ್ಲದ್ದಾಗಿರುವುದು, ಸುರಕ್ಷತಾ ಕ್ರಮಗಳನ್ನು ಅನುಸರಿಸದೇ ಇರುವುದು ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ಈ ರೀತಿಯ ಭೀಕರ ರಸ್ತೆ ಅಪಘಾತಗಳು ಹೆಚ್ಚಾಗಿ ನಡೆಯುತ್ತಿರುತ್ತವೆ. ಪ್ರಯಾಣಿಕ ಬಸ್ಸುಗಳಲ್ಲಿ ಸಾಮರ್ಥ್ಯಕ್ಕಿಂತಲೂ ಹೆಚ್ಚು ಜನರನ್ನು ಒಯ್ಯುವುದು, ಸೀಟ್ ಬೆಲ್ಟ್ ಧಾರಣೆಯನ್ನು ಕಡೆಗಣಿಸುವುದು ಕೂಡಾ ಅಪಘಾತದಲ್ಲಿ ಹೆಚ್ಚಿನ ಸಾವು ನೋವುಗಳು ಸಂಭವಿಸಲು ಕಾರಣವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಅಂದಾಜಿನ ಪ್ರಕಾರ 2018ರಲ್ಲಿ ಪಾಕಿಸ್ತಾನದ ರಸ್ತೆ ಅಪಘಾತದಲ್ಲಿ 27,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪರೀಕ್ಷೆ ದಿನವೇ ಗುಜರಾತ್ನ ಜೂನಿಯರ್ ಕ್ಲರ್ಕ್ ಪ್ರಶ್ನೆಪತ್ರಿಕೆ ಸೋರಿಕೆ – ಓರ್ವ ವಶ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k