ನವದೆಹಲಿ: ಆಳವಾದ ಕಂದಕಕ್ಕೆ ಬಸ್ಸೊಂದು ಬಿದ್ದ ಪರಿಣಾಮ ಕನಿಷ್ಠ 38 ಜನರು ಸಾವನ್ನಪ್ಪಿದ್ದು, ಹಲವು ಜನರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ದೋಡಾ (Doda) ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ನಡೆದಿದೆ. ದೋಡಾ ಜಿಲ್ಲೆಯಲ್ಲಿ ಒಂದು ವಾರದಲ್ಲಿ ನಡೆದ ಎರಡನೇ ರಸ್ತೆ ಅಪಘಾತ ಇದಾಗಿದೆ.
ಬಸ್ ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್-ಅಸ್ಸಾರ್ ಬಳಿ ಸ್ಕಿಡ್ ಆಗಿ 300 ಅಡಿ ಕೆಳಗೆ ಬಿದ್ದಿದೆ ಎನ್ನಲಾಗಿದೆ. ಬಸ್ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಕೆಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಬ್ಯಾಡಗಿಯಲ್ಲಿ ಖಾಸಗಿ ಬಸ್ ಪಲ್ಟಿ – ಪ್ರಯಾಣಿಕರಿಗೆ ಗಾಯ
Advertisement
Advertisement
ದೋಡಾದ ಅಸ್ಸಾರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸಂತ್ರಸ್ತ ವ್ಯಕ್ತಿಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡುವಂತೆ ಡಿವಿ ಕಾಮ್ ಮತ್ತು ಡಿಸ್ಟ್ ಅಡ್ಮಿನ್‌ಗೆ ನಿರ್ದೇಶನ ನೀಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹರಿದು ಪೊಲೀಸ್ ಸಾವು; ಇದೇನು ಹೊಸದಲ್ಲ ಎಂದ ಸಚಿವ
Advertisement
ಪ್ರಧಾನಿ ನರೇಂದ್ರ ಮೋದಿ (Narendra Modi) ಘಟನೆಯ ಕುರಿತು ಸಂತಾಪ ಸೂಚಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತ ದುಃಖಕರವಾಗಿದೆ. ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪಿಎಂಒ ಎಕ್ಸ್‌ನಲ್ಲಿ (X) ಪೋಸ್ಟ್ ಮಾಡಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಅಲ್ಲದೇ ಗಾಯಗೊಂಡವರಿಗೆ 50,000 ರೂ. ನೆರವು ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟಕ್ಕೆ ಮನೆ ಛಿದ್ರ ಛಿದ್ರ – ಮೂವರು ಗಂಭೀರ
Advertisement
ಓವರ್‌ಟೇಕ್ ಮಾಡುವ ಪೈಪೋಟಿಯಲ್ಲಿ ಅಪಘಾತ:
ಈ ಮಾರ್ಗದಲ್ಲಿ ಮೂರು ಬಸ್‌ಗಳು ಒಟ್ಟಿಗೆ ಸಂಚರಿಸುತ್ತಿದ್ದವು. ಪರಸ್ಪರ ಓವರ್‌ಟೇಕ್ ಮಾಡುವ ಪೈಪೋಟಿಯಲ್ಲಿ ಈ ಭಾರಿ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಲಕ್ಷ್ಮೀ ಪೂಜೆಗಿಟ್ಟಿದ್ದ ವಜ್ರಾಭರಣ ಹೊತ್ತೊಯ್ದ ಕಳ್ಳರು
ಜಿಲ್ಲಾಧಿಕಾರಿ, ಎಸ್‌ಎಸ್‌ಪಿ ದೋಡಾ ಮತ್ತು ಇತರ ಹಲವು ಅಧಿಕಾರಿಗಳು ಜಿಎಂಸಿ ದೋಡಾ ತಲುಪಿದ್ದಾರೆ. ಗಾಯಾಳುಗಳಿಗೆ ತಕ್ಷಣವೇ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪಟಾಕಿಗೆ ಆಕಸ್ಮಿಕ ಬೆಂಕಿ – ಕುರ್ಚಿ ಸಮೇತ ಹಾರಿ ಬಿದ್ದು ಯುವಕ ಸಾವು