DistrictsHaveriKarnatakaLatestMain Post

ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಬಸ್ – 7 ಮಂದಿಗೆ ಗಾಯ, ತಪ್ಪಿದ ಭಾರೀ ಅನಾಹುತ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್(bus) ಹಳ್ಳಕ್ಕೆ ಬಿದ್ದಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 7 ಜನರಿಗೆ ಗಾಯವಾದ ಘಟನೆ ಹಾವೇರಿ(haveri) ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿರುವ ಲಂಡೇನಹಳ್ಳದಲ್ಲಿ ನಡೆದಿದೆ.

ಬಸ್ ಗದಗ(Gadag)ದಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಬಸ್ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದಿದೆ. ಬಸ್ ಹಳ್ಳಕ್ಕೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಬಸ್ಸಿನಲ್ಲಿದ್ದವರನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಣೆ ಮಾಡಿದ್ದಾರೆ. ಇದ್ನನೂ ಓದಿ: ಕಾಡಾನೆ ದಾಳಿಗೆ ಕಾರ್ಮಿಕ ಬಲಿ; ಅರಣ್ಯ ಇಲಾಖೆ ಮುಂದೆ ಶವವಿಟ್ಟು ಪ್ರತಿಭಟನೆ – ಲಾಠಿಚಾರ್ಜ್‌

ಹಳ್ಳದಲ್ಲಿ ಭಾರೀ ಪ್ರಮಾಣದ ನೀರು ಇಲ್ಲದಿದ್ದರಿಂದ ದೊಡ್ಡ ದುರಂತ ತಪ್ಪಿದೆ. ಗಾಯಾಳುಗಳಿಗೆ ಬಂಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇದ್ನನೂ ಓದಿ: ಕೋವಿಡ್‌ನಿಂದ ಮೃತಪಟ್ಟವರ ಸಮಾಧಿಗಳ ಮೇಲೆ ಬಿಜೆಪಿ ಸರ್ಕಾರದಿಂದ ಭ್ರಷ್ಟೋತ್ಸವ – ಕಾಂಗ್ರೆಸ್‌ ಕಿಡಿ

Live Tv

Leave a Reply

Your email address will not be published.

Back to top button