ಹಾಸನ: ಸುಮಾರು 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದ ಖಾಸಗಿ ಬಸ್ಸೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಬಸ್ ಸುಟ್ಟು ಸಂಪೂರ್ಣ ಕರಕಲಾಗಿರುವ ಘಟನೆ ಜಿಲ್ಲೆಯ ಹೊರವಲಯದಲ್ಲಿ ಸಂಭವಿಸಿದೆ.
ಹಾಸನ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೆಂಚಟಹಳ್ಳಿ ಗ್ರಾಮದ ಬಳಿ ತಡರಾತ್ರಿ ಈ ಅವಘಡ ಸಂಭವಿಸಿದೆ. ಖಾಸಗಿ ಸ್ಲೀಪರ್ ಕೋಚ್ ಬಸ್ ನಲ್ಲಿ ಈ ಅವಘಡ ಸಂಭವಿಸಿದ್ದು, ಇದು ಮಂಗಳೂರಿನಿಂದ ಬೆಂಗಳೂರಿಗೆ ಕಡೆಗೆ ತೆರಳುತಿತ್ತು. ಬಸ್ ನಲ್ಲಿ ಸುಮಾರು 30 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
- Advertisement 2
- Advertisement 3
ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ತಕ್ಷಣವೇ ಚಾಲಕರ ಗಮನಕ್ಕೆ ಬಂದಿದೆ. ಕೂಡಲೇ ಅವರು ಬಸ್ಸನ್ನು ರಸ್ತೆಯ ಪಕ್ಕಕ್ಕೆ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಆದ್ದರಿಂದ ಈ ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
- Advertisement 4
ಈ ಘಟನೆ ಸಂಬಂಧಿಸಿದಂತೆ ಹಾಸನ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾಂತ್ರಿಕ ದೋಷದಿಂದ ಬಸ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.