ದಾವಣಗೆರೆ: ದಾವಣಗೆರೆಯ (Davangere) ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ (Accident) ಸಂಭವಿಸಿದೆ. ಬೆಳಗಾವಿ ಅಧಿವೇಶನದ (Belagavi Session) ಬಳಿ ಪ್ರತಿಭಟನೆಗೆ (Protest) ತೆರಳುತ್ತಿದ್ದ ಬಸ್ (Bus) ಲಾರಿಗೆ ಡಿಕ್ಕಿ ಹೊಡೆದಿದೆ.
ಬಸ್ನಲ್ಲಿ ಬೆಂಗಳೂರು, ಚಿಕ್ಕಬಳ್ಳಾಪುರ, ಚಿಂತಾಮಣಿ ಮಾದಿಗ ದಂಡೋರ ಜಾಗೃತಿ ಸಮಿತಿ ಪದಾಧಿಕಾರಿಗಳು ಇದ್ದರು. ಸದಾಶಿವ ಆಯೋಗ ಜಾರಿಗೆ ಆಗ್ರಹಿಸಿ ಹೋರಾಟಗಾರರು ಪ್ರತಿಭಟನೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು – ರೈಲು ಸೇವೆಯಲ್ಲಿ ವ್ಯತ್ಯಯ
ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ 17 ಮಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪ್ರೀತಿಸುತ್ತಿದ್ದ ಯುವತಿಯೊಂದಿಗೆ ಯುವಕ ಪರಾರಿಯಾಗಿದ್ದಕ್ಕೆ ತಾಯಿಯ ವಿವಸ್ತ್ರಗೊಳಿಸಿ ಹಲ್ಲೆ