ಬೆಂಗಳೂರು: ಯಾವಾಗಲೂ ಜನ ಸಂದಣಿಯಿಂದ ಕೂಡಿರುತ್ತಿದ್ದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲೋದಕ್ಕೆ ಬಿಡುತ್ತಿರಲಿಲ್ಲ ಜನ ಓಡೋಡಿ ಬರುತ್ತಿದ್ದರು. ಆದರೆ ಇಂದು ಬಸ್‍ಗಳ ಸಂಚಾರವಿದ್ದರೂ ಪ್ರಯಾಣಿಕರು ಮಾತ್ರ ಬೆರಳೆಣಿಕೆಯಷ್ಟು ಮಾತ್ರ ಕಾಣಸಿಗುತ್ತಿದ್ದಾರೆ.
ಹೌದು. ಇಂದು ಸರೋಜಿನ ಮಹಿಷಿ ವರದಿಯನ್ನ ಜಾರಿಗೆ ತರುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ನಾವು ಅರ್ಧ ಗಂಟೆಯಿಂದ ಕಾದರೂ ಜನ ಬರುತ್ತಿಲ್ಲ ಬಂದ್ ಅಂತ ಜನ ಭಯಪಡುತ್ತಿದ್ದಾರೆ. ವೋಲ್ವೋದಲ್ಲಂತೂ ಎರಡು ಪ್ರಯಾಣಿಕರು ಇದ್ದರೆ ಹೆಚ್ಚು ಎಂದು ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರು ಅಳಲು ತೋಡಿಕೊಂಡರು. ಬಂದ್ ಪರಿಣಾಮ ಬಿಎಂಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಲ್ಲದೆ ಸಂಪೂರ್ಣ ಭಣಗುಟ್ಟುತ್ತಿದೆ.
Advertisement
Advertisement
ಇತ್ತ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಎಲ್ಲೆಡೆ ಪೊಲೀಸರ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಪ್ರತಿ ಸರ್ಕಲ್‍ಗೂ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಬಸ್ ಸಂಚಾರ ಯಥಾಸ್ಥಿತಿಯಿದ್ದು, ಎಂದಿನಂತೆ ಬಿಎಂಟಿಸಿ, ಕೆಎಸ್ಆರ್‌ಟಿಸಿ ಬಸ್‍ಗಳು ಸಂಚರಿಸುತ್ತಿದೆ. ಆದರೆ ಜನರಿಲ್ಲದೆ ಮೆಜೆಸ್ಟಿಕ್ ಬಸ್ ನಿಲ್ದಾಣ ಮಾತ್ರ ಖಾಲಿ ಖಾಲಿ ಕಾಣಿಸುತ್ತಿದೆ.
Advertisement
Advertisement
ಡಿಸಿಪಿ ರಮೇಶ್ ಬಾನೋತ್ ನೇತೃತ್ವದಲ್ಲಿ ಭದ್ರತೆ ನಿಯೋಜಿಸಲಾಗಿದೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಕೂಡ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಮೆಜೆಸ್ಟಿಕ್‍ನಿಂದ ಫ್ರೀಡಂ ಪಾರ್ಕ್ ವರೆಗೂ ರ‍್ಯಾಲಿ ನಡೆಯಲಿರುವ ಹಿನ್ನೆಲೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಭಧ್ರತೆ ಒದಗಿಸಲಾಗಿದೆ. 1 ಕೆಎಸ್‌ಆರ್‌ಪಿ ತುಕಡಿ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹೊಯ್ಸಳ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಹಾಗೆಯೇ ರೈಲ್ವೆ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಎಂದಿನಂತೆ ರೈಲುಗಳು ಸಂಚರಿಸಲಿದೆ. ಆದರೆ ಪ್ರಯಾಣಿಕರ ಸಂಖ್ಯೆಯಲ್ಲಿ ಶೇಕಡಾ 50ರಷ್ಟು ಇಳಿಕೆಯಾಗಿದೆ.