ಮೈಸೂರು: ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಬಸ್ ಬೆಂಕಿಗೆ ಆಹುತಿಯಾಗಿದ್ದು, ಕರ್ನಾಟಕದಿಂದ ಶಬರಿ ಮಲೆಗೆ ತೆರಳಿದ್ದ 35ಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.
ಶುಕ್ರವಾರ ಸಂಜೆ ಕೇರಳದ ನೆಲಕ್ಕಲ್‍ನಿಂದ ಪಂಪಾ ನದಿಗೆ ಕೇರಳ ಸರ್ಕಾರಿ ಬಸ್ಸಿನಲ್ಲಿ ತೆರಳುವಾಗ ಈ ಅವಘಡ ಸಂಭವಿಸಿದೆ. ಈ ಬಸ್ಸಿನಲ್ಲಿ ಮೈಸೂರಿನ ಹೂಟಗಳ್ಳಿ ಬಡವಾಣೆಯ 23 ಮಂದಿ ಅಯ್ಯಪ್ಪನ ಭಕ್ತರು ಇದ್ದರು. ಟಯರ್ ಸ್ಪೋಟಗೊಂಡ ಪರಿಣಾಮ ಇಡೀ ಬಸ್ಸಿಗೆ ಬೆಂಕಿ ಹತ್ತಿಕೊಂಡು ಉರಿದಿದೆ.
Advertisement
Advertisement
ಘಟನೆ ನಡೆದ ತಕ್ಷಣ ಸ್ಥಳೀಯರ ಸಹಾಯದಿಂದ ಎಲ್ಲ ಭಕ್ತರ ರಕ್ಷಣೆ ಮಾಡಿದ್ದು, ಓರ್ವ ಯುವಕನಿಗೆ ಮಾತ್ರ ಗಾಯವಾಗಿದೆ. ಗಾಯಗೊಂಡ ಯುವಕನನ್ನು ಕೇರಳದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Advertisement
ಮಾಹಿತಿ ತಿಳಿದು ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಪ್ರಾಣಾಪಾಯದಿಂದ ಪಾರಾದ ಮೈಸೂರಿನ ಹೂಟಗಳ್ಳಿ ನಿವಾಸಿಗಳು ಮೈಸೂರಿಗೆ ಹಿಂದಿರುಗಿದ್ದಾರೆ.