– 100 ಮೀ. ಉದ್ದಕ್ಕೆ 30-40 ವಾಹನಗಳಿಗೆ ಡಿಕ್ಕಿ
ಮುಂಬೈ: ಬಸ್‌ನ ಬ್ರೇಕ್‌ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ 6 ಜನ ಸಾವನ್ನಪ್ಪಿದ್ದು, 49 ಜನ ಗಾಯಗೊಂಡಿರುವ ಘಟನೆ ಮುಂಬೈನ (Mumbai) ಕುರ್ಲಾದಲ್ಲಿ (Kurla) ನಡೆದಿದೆ.
Advertisement
ಬೃಹತ್ ಮುಂಬೈ ಸರಬರಾಜು ಮತ್ತು ಸಾರಿಗೆ ಸಂಸ್ಥೆಯ ಬಸ್‌ನ ಬ್ರೇಕ್ ಫೇಲ್ ಆದ ಪರಿಣಾಮ ಅಪಘಾತ ಸಂಭವಿಸಿದೆ. ಸೋಮವಾರ (ಡಿ.9) ರಾತ್ರಿ 9:50ಕ್ಕೆ ಬಸ್ ಕುರ್ಲಾ ನಿಲ್ದಾಣದಿಂದ ಅಂಧೇರಿಗೆ ಹೋಗುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದೆ. ಬಳಿಕ 30 ರಿಂದ 40 ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಪಾದಚಾರಿಗಳ ಮೇಲೆ ಹಾಯ್ದು ಮುಂದಕ್ಕೆ ಸಾಗಿದೆ. ಎದುರಿಗೆ ಇದ್ದ ಗೋಡೆಗೆ ಡಿಕ್ಕಿ ಹೊಡೆದು ಬಳಿಕ ಅಲ್ಲಿಯೇ ನಿಂತಿದೆ.ಇದನ್ನೂ ಓದಿ: ‘ಪುಷ್ಪ 2’ ಸಕ್ಸಸ್ ನಂತರ ಬಾಲಿವುಡ್‌ನಲ್ಲಿ ಫಹಾದ್ ಫಾಸಿಲ್‌ಗೆ ಬಂಪರ್ ಆಫರ್
Advertisement
Advertisement
ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 49 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಯಾನ್ ಮತ್ತು ಕುರ್ಲಾ ಭಾಭಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಅಪಘಾತದ ದೃಶ್ಯಗಳು ಸೆರೆಯಾಗಿವೆ. ಬಸ್ ಅತೀವೇಗದಿಂದ ಕೆಳಗಿಳಿಯುತ್ತಿದ್ದು, ಮೊದಲು ಆಟೋ ರಿಕ್ಷಾಗೆ ಡಿಕ್ಕಿ ಹೊಡೆಯುತ್ತದೆ.
Advertisement
ಈ ಕುರಿತು ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಯೊಬ್ಬರು ಮಾತನಾಡಿ, ಬಸ್‌ನ ಬ್ರೆಕ್ ಫೇಲ್ ಆದ ಪರಿಣಾಮ ಈ ಅಪಘಾತ ಸಂಭವಿಸಿದೆ. ವಾಹನವು ಒಲೆಕ್ಟ್ರಾದಿಂದ ತಯಾರಿಸಲ್ಪಟ್ಟ 12 ಮೀಟರ್ ಉದ್ದದ ಎಲೆಕ್ಟ್ರಿಕ್ ಬಸ್ ಆಗಿದ್ದು, ಇದನ್ನು ಬೆಸ್ಟ್ ಲೀಸ್‌ನಲ್ಲಿ ತೆಗೆದುಕೊಳ್ಳಲಾಗಿದೆ. ಬಸ್ ಕೇವಲ ಮೂರು ತಿಂಗಳ ಹಳೆಯದು. ಇದನ್ನು ಈ ವರ್ಷ ಆ.20 ರಂದು ಖರೀದಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಅಪಘಾತವನ್ನು ಕಂಡ ಪ್ರತ್ಯಕ್ಷದರ್ಶಿಗಳು ಮಾತನಾಡಿ, ನಾನು ರೈಲ್ವೇ ನಿಲ್ದಾಣಕ್ಕೆ ಹೋಗುವಾಗ ಜೋರಾಗಿ ಶಬ್ದವೊಂದು ಕೇಳಿತು. ಸ್ಥಳಕ್ಕೆ ಹೋಗಿ ನೋಡಿದಾಗ ಬಸ್ ಪಾದಚಾರಿಗಳಿಗೆ ಹಾಗೂ ಆಟೋರಿಕ್ಷಾ ಸೇರಿದಂತೆ ಮೂರು ಕಾರುಗಳು ಹಾಗೂ ಪೊಲೀಸ್ ವಾಹನಕ್ಕೂ ಡಿಕ್ಕಿ ಹೊಡೆದಿತ್ತು. ನಾನು ಆಟೋದಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದುಕೊಂದು ಹೋದೆವು ಎಂದು ತಿಳಿಸಿದ್ದಾರೆ.
ಸದ್ಯ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಿಎನ್‌ಎಸ್ ಸೆಕ್ಷನ್ 105ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನೂ ಚಾಲಕ ಕುಡಿದು ಬಸ್ ಚಲಾಯಿಸುತ್ತಿದ್ದನಾ? ಎಂದು ತಿಳಿಯಲು ರಕ್ತದ ಮಾದರಿ ಸಂಗ್ರಹಿಸಿ ತಪಾಸಣೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ -ಹೋರಾಟಗಾರರ ಮೇಲೆ ಲಾಠಿಚಾರ್ಜ್