InternationalLatestMain Post

ಬಸ್, ತೈಲ ಟ್ಯಾಂಕರ್ ನಡುವೆ ಡಿಕ್ಕಿ – ಸುಟ್ಟು ಕರಕಲಾದ 20 ಜನ

ಇಸ್ಲಾಮಾಬಾದ್: ಪ್ರಯಾಣಿಕರ ಬಸ್ ಹಾಗೂ ತೈಲ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ 20 ಮಂದಿ ಸಜೀವ ದಹನವಾಗಿರುವ ಘಟನೆ ಮಂಗಳವಾರ ಪಾಕಿಸ್ತಾನದ ಪಂಜಾಬ್‌ನಲ್ಲಿ ನಡೆದಿದೆ. ಇದು ಕೇವಲ 3 ದಿನಗಳಲ್ಲಿ ಈ ಪ್ರದೇಶದಲ್ಲಿ ನಡೆದ 2ನೇ ದೊಡ್ಡ ರಸ್ತೆ ಅವಘಡವಾಗಿದೆ.

ಲಾಹೋರ್‌ನಿಂದ ಸುಮಾರು 350 ಕಿ.ಮೀ ದೂರದಲ್ಲಿರುವ ಮುಲ್ತಾನ್‌ನ ಮೋಟಾರು ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಹಲವು ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಅಗ್ನಿಶಾಮಕ ದಳ ಹಾಗೂ ರಕ್ಷಣಾ ತಂಡಗಳು ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಟ್ಟಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮತ್ತೆ ಪಂಡಿತರು ಟಾರ್ಗೆಟ್ – ಓರ್ವನ ಹತ್ಯೆ, ಮತ್ತೋರ್ವ ಗಂಭೀರ

ಲಾಹೋರ್‌ನಿಂದ ಕರಾಚಿಗೆ ಹೋಗುತ್ತಿದ್ದ ಬಸ್ ಹಾಗೂ ತೈಲದ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ 20 ಜನರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಟ್ಯಾಂಕರ್ ಎರಡೂ ಹೊತ್ತಿ ಉರಿದಿವೆ. ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಹಲವರಿಗೆ ತೀವ್ರವಾದ ಸುಟ್ಟ ಗಾಯಗಳಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯೂ ಇದೆ. ಗಾಯಾಳುಗಳನ್ನು ಮುಲ್ತಾನ್‌ನ ನಿಶ್ತಾರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನದಿ ಕಣಿವೆಗೆ ಉರುಳಿದ ಬಸ್- 6 ಮಂದಿ ಯೋಧರು ಹುತಾತ್ಮ

ಹಲವು ಮೃತದೇಹಗಳು ಸಂಪೂರ್ಣವಾಗಿ ಸುಟ್ಟು ಹೋಗಿರುವುದರಿಂದ ಗುರುತು ಪತ್ತೆ ಹಚ್ಚಲು ಕಷ್ಟವಾಗುತ್ತಿದೆ. ಮೃತದೇಹಗಳ ಡಿಎನ್‌ಎ ಪರೀಕ್ಷೆಯ ಬಳಿಕ ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗುವುದು ಎಂದು ಹೇಳಿದ್ದಾರೆ.

ಶನಿವಾರ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಪ್ರಯಾಣಿಕ ಬಸ್‌ಗೆ ಲೋಡ್ ಟ್ರಕ್ ಡಿಕ್ಕಿ ಹೊಡೆದು 12 ಜನರು ಸಾವನ್ನಪ್ಪಿದ್ದರು.

Live Tv

Leave a Reply

Your email address will not be published.

Back to top button