– ಸೇತುವೆ ಮೇಲೆ ಯಾವುದೇ ತಡೆಗೋಡೆ ಇಲ್ಲ
ಜೈಪುರ: ಮದುವೆ ಮುಗಿಸಿ ವಾಪಸ್ ಬರುತ್ತಿದ್ದ ಖಾಸಗಿ ಬಸ್ ನದಿಗೆ ಬಿದ್ದ ಪರಿಣಾಮ 25ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ನಡೆದಿದೆ.
ಬುಂಡಿ ಜಿಲ್ಲೆಯ ಕೋಟಾ-ದೌಸಾ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಅಪಘಾತದಲ್ಲಿ 30 ಜನರು ಸಾವನ್ನಪ್ಪಿದ್ದಾರೆ. ಆದರೆ ಈವರೆಗೆ 24 ಮೃತದೇಹಗಳು ಪತ್ತೆಯಾಗಿರುವ ಕುರಿತು ವರದಿಯಾಗಿದ್ದು, ಅನೇಕರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ನಂತರ ರಾಜ್ಯ ಸರ್ಕಾರವು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
Advertisement
Advertisement
ಬುಂಡಿ ಜಿಲ್ಲೆಯ ಕೇಶೋರೈಪಟಾನ್ ಪ್ರದೇಶದಲ್ಲಿ ಪ್ರಯಾಣಿಕರು ತುಂಬಿದ ಬಸ್ ನದಿಗೆ ಬಿದ್ದಿದೆ. ಬುಂಡಿಯ ಮೇಜ್ ನದಿಯ ಕಲ್ವರ್ಟ್ ನಲ್ಲಿ ಈ ಅಪಘಾತ ಸಂಭವಿಸಿದೆ. ಬಸ್‍ನಲ್ಲಿದ್ದವರು ವಿವಾಹ ಸಮಾರಂಭಕ್ಕೆ ಹೋಗಿ ವಾಪಸ್ ಬರುತ್ತಿದ್ದರು. ಬಸ್ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಹೊಂದಿತ್ತು. ಹೀಗಾಗಿ ನದಿ ಸೇತುವೆಯ ಮೇಲೆ ಬಸ್ಸನ್ನು ನಿಯಂತ್ರಿಸಲು ಚಾಲಕನಿಗೆ ಸಾಧ್ಯವಾಗಲಿಲ್ಲ. ಅಲ್ಲದೇ ಕಲ್ವರ್ಟ್ ನಲ್ಲಿ ಯಾವುದೇ ಸುರಕ್ಷತಾ ಗೋಡೆ ಇಲ್ಲ. ಹೀಗಾಗಿ ಬಸ್ ನದಿಗೆ ಬಿದ್ದಿದೆ ಎಂದು ಸಬ್ ಇನ್ಸ್‌ಪೆಕ್ಟರ್ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
Advertisement
Rajasthan: 24 people dead, 5 people injured after a bus fell into a river in Bundi today. https://t.co/wipW2lGbdr
— ANI (@ANI) February 26, 2020
Advertisement
ಪರಿಣಾಮ 25ಕ್ಕೂ ಅಧಿಕ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಇನ್ನೂ ಅಪಘಾತದಲ್ಲಿ ಗಾಯಾಗೊಂಡವರನ್ನು ಲೆಖಾರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರವಾಗಿ ಗಾಯಗೊಂಡವರನ್ನು ಕೋಟಾದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಾಹಿತಿ ತಿಳಿದು ತಕ್ಷಣ ಪೊಲೀಸರು ಸ್ಥಳಕ್ಕೆ ತಲುಪಿ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ. ಸದ್ಯಕ್ಕೆ ಮೃತದೇಹಗಳನ್ನು ಬಸ್‍ನಿಂದ ಹೊರತೆಗೆಯುವ ಕಾರ್ಯಾಚರಣೆಯನ್ನು ಪೊಲೀಸರು ಮಾಡುತ್ತಿದ್ದಾರೆ.
I am deeply saddened to learn about the tragic accident in #Bundi in which 24 people have lost lives after the bus fell into river Mej.. My heartfelt condolences to the bereaved families who have lost their loves ones in this tragedy. I wish speedy recovery to all injured.
— Ashok Gehlot (@ashokgehlot51) February 26, 2020
ಅಪಘಾತದ ಬಗ್ಗೆ ತಿಳಿದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ, “ಬುಂಡಿಯಲ್ಲಿ ಸಂಭವಿಸಿದ ದುರಂತದ ಬಗ್ಗೆ ತಿಳಿದು ನಾನು ತುಂಬಾ ದುಃಖಿತನಾಗಿದ್ದೇನೆ. ಬಸ್ ಮೇಜ್ ನದಿಗೆ ಬಿದ್ದ ನಂತರ ಸುಮಾರು 24 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.