ಧರ್ಮಸ್ಥಳಕ್ಕೆ ಹೋಗುತ್ತಿದ್ದ ಪಾದಚಾರಿಗಳ ಮೇಲೆ ಹರಿದ ಬಸ್ – ಇಬ್ಬರು ಸಾವು

Public TV
1 Min Read
Hassan Accident

– ಓರ್ವನ ಸ್ಥಿತಿ ಗಂಭೀರ

ಹಾಸನ: ಧರ್ಮಸ್ಥಳಕ್ಕೆ (Dharmasthala) ತೆರಳುತ್ತಿದ್ದ ಪಾದಚಾರಿಗಳ (Pedestrian) ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾಸನ (Hassan) ತಾಲೂಕಿನ ಕೆಂಚಟ್ಟಹಳ್ಳಿ ಬಳಿ ನಡೆದಿದೆ.

ಸುರೇಶ್ (60), ಕುಮಾರ್ (55) ಮೃತ ದುರ್ದೈವಿಗಳು. ಮೃತರು ಮಂಡ್ಯ ಜಿಲ್ಲೆ, ಕೆಆರ್ ಪೇಟೆ ತಾಲೂಕಿನ ಆನಗೋಳು ಗ್ರಾಮದವರು. ಘಟನೆಯಲ್ಲಿ ಗಂಭೀರ ಗಾಯಗೊಂಡ ದಿನೇಶ್‌ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಪಾಕ್ ವಿರುದ್ಧ ಭಾರತದ ಗೆಲುವುಗಾಗಿ ವಿಶೇಷ ಪೂಜೆ- ಬೆಂಗಳೂರು ಕ್ರೀಡಾಭಿಮಾನಿಗಳಿಂದ ಶುಭ ಹಾರೈಕೆ

ಇಂದು ಮುಂಜಾನೆ ಧರ್ಮಸ್ಥಳಕ್ಕೆ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

Share This Article