ಮಡಿಕೇರಿ: ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‍ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಮಡಿಕೇರಿ ನಗರದ ಹೊರವಲಯದ ಚೈನ್ ಗೇಟ್ ಬಳಿ ಸರ್ಕಾರಿ ಬಸ್ಸಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.
ಇಂದು ಬೆಳಿಗ್ಗೆ ಮಡಿಕೇರಿಯಿಂದ ಮೈಸೂರಿಗೆ ಸರ್ಕಾರಿ ಬಸ್ ತೆರಳುತ್ತಿತ್ತು. ಆಗ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಹಿನ್ನೆಲೆಯಲ್ಲಿ ಬಸ್ಸಿನ ಮುಂಭಾಗದ ಗ್ಲಾಸ್‌ಗೆ ಸಣ್ಣಪುಟ್ಟ ಹಾನಿಯಾಗಿದೆ. ಬಸ್ಸಿನಲ್ಲಿ ಯಾರೊಬ್ಬ ಪ್ರಯಾಣಿಕರು ಇಲ್ಲದೇ ಇದ್ದುದ್ದರಿಂದ ಯಾವುದೇ ಅಹಿತಕರ ಘಟನೆ ನಡೆದಿಲ್ಲ.
Advertisement
ಮಂಡ್ಯ ಜಿಲ್ಲೆಯ ಪಾಂಡವಪುರ ವಿಭಾಗಕ್ಕೆ ಸೇರಿದ ಸರ್ಕಾರಿ ಬಸ್ ಇದಾಗಿದ್ದು. ಬಸ್ ಚಾಲಕ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರತಿಭಟನೆ ಮಾಡುವವರು ಈ ರೀತಿಯಲ್ಲಿ ಮಾಡಿಲ್ಲ. ಯಾರೋ ಕಿಡಿಗೇಡಿಗಳು ಈ ರೀತಿಯಲ್ಲಿ ಮಾಡಿದ್ದಾರೆ. ಕೊಡಗು ಶಾಂತಿ ಪ್ರಿಯನಾಡು ಈ ರೀತಿಯಲ್ಲಿ ಕೃತ್ಯ ಮಾಡುವವರನ್ನು ಬಂಧಿಸಬೇಕು ಎಂದು ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.