ಬಸ್ ಟಿಕೆಟ್ ದರ ಏರಿಕೆ – ಪ್ರಯಾಣಿಕರಿಗೆ ಗುಲಾಬಿ ಕೊಟ್ಟು ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ

Public TV
1 Min Read
R Ashok Mejestic

– ತಡೆಯಲು ಹೋದ ಪೊಲೀಸರೊಂದಿಗೆ ವಾಗ್ವಾದ

ಬೆಂಗಳೂರು: ನಾಲ್ಕು ನಿಗಮಗಳ ಪ್ರಯಾಣ ದರ ಏರಿಕೆ (Bus Ticket Price Hike) ಖಂಡಿಸಿ, ಬೆಂಗಳೂರಿನ (Bengaluru) ಮೆಜೆಸ್ಟಿಕ್ (Mejestic) ಬಸ್ ನಿಲ್ದಾಣದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ (R Ashok) ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

R Ashok Mejestic 1

ಈ ವೇಳೆ ಮಾತನಾಡಿದ ಅವರು, ಬಡವರಿಗೆ ಬಿಜೆಪಿ ಫ್ರೀ ಕೊಟ್ಟಿರಲಿಲ್ಲ. ಕಾಂಗ್ರೆಸ್ ಫ್ರೀ ಕೊಟ್ಟು ದರ ಏರಿಕೆ ಮಾಡಿದೆ. ಹಾಲಿನಲ್ಲಿ ಕಲ್ಲು ಹಾಕಿದ ದುರುಳರು ಇವರು. ಮದ್ಯದ ದರವೂ ಏರಿಕೆ ಮಾಡಿದ್ದೀರಿ. ವಿದ್ಯುತ್, ನೋಂದಣಿ ದರವೂ ಏರಿಕೆ ಮಾಡಿದ್ದೀರಿ. ಈ ಸರ್ಕಾರ ಎಲ್ಲದಕ್ಕೂ ಟ್ಯಾಕ್ಸ್ ಹಾಕಿದೆ. ಬಸ್ ದರ ಏರಿಕೆ ಮೂಲಕ ಬಡ ಜನರಿಗೆ ಸಿಎಂ ಒಳ್ಳೆದು ಮಾಡಿದ್ದಾರೆ. ನಾವು ಪ್ರಯಾಣಿಕರಿಗೆ ಗುಲಾಬಿ ಕೊಡುತ್ತೇವೆ. ನಮ್ಮನ್ನು ಕ್ಷಮಿಸಿ ಬಿಡಿ ಎಂದು ಗುಲಾಬಿ ಕೊಡುತ್ತೇವೆ. ಕಂದಾಯ, ಮನೆ ಬಾಡಿಗೆ ಎಲ್ಲವೂ ದರ ಏರಿಕೆಯಾಗಿದೆ. ನಾನು ಸಾರಿಗೆ ಸಚಿವ ಇದ್ದಾಗ 1 ಸಾವಿರ ಕೋಟಿ ಲಾಭ ಇತ್ತು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರೆಸ್ಟೋರೆಂಟ್ ಮಾಲೀಕನ ಪುತ್ರ, ಸಿಬ್ಬಂದಿಯಿಂದ ಹಲ್ಲೆ – ನ್ಯೂ ಇಯರ್‌ಗೆ ಗೋವಾಗೆ ತೆರಳಿದ್ದ ಆಂಧ್ರದ ಯುವಕ ಸಾವು

ಇನ್ನು ಇದೇ ವೇಳೆ ಪ್ರಯಾಣಿಕರಿಗೆ ಹೂ ಕೊಡಲು ಹೋದಾಗ ಅಶೋಕ್ ಅವರನ್ನು ಪೊಲೀಸರು ತಡೆದಿದ್ದಾರೆ. ಈ ಸಂದರ್ಭ ಅಶೋಕ್ ಹಾಗೂ ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಪೊಲೀಸ್ ದೌರ್ಜನ್ಯ ಬೇಡ. ರೈಟಿಂಗ್‌ನಲ್ಲಿ ಪ್ರತಿಭಟನೆ ಮಾಡಬಾರದು ಎಂದು ಕೊಡಿ. ಸರ್ಕಾರ ಇದೇ ಇರೋದಿಲ್ಲ. ನಾಟಕ ಆಡುತ್ತಿದ್ದೀರಾ ನೀವು ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದರು. ಈ ವೇಳೆ ಅಶೋಕ್ ಜೊತೆ ಬಿಜೆಪಿ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ಕಾಂಗ್ರೆಸ್‌ನ ಪಾಪದ ಕೊಡ ತುಂಬಿದೆ, ದೇವರೇ ಶಿಕ್ಷೆ ಕೊಡ್ತಾನೆ: ಕುಮಾರಸ್ವಾಮಿ

Share This Article