Latest

ಬಸ್, ಟ್ರಕ್ ಮಧ್ಯೆ ಭೀಕರ ಅಪಘಾತಕ್ಕೆ 7 ಬಲಿ – 14 ಮಂದಿ ಗಂಭೀರ

Published

on

bus
Share this

ಭೋಪಾಲ್: ಬಸ್ ಹಾಗೂ ಕಂಟೇನರ್ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 7 ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇದನ್ನೂ ಓದಿ: ಪತ್ನಿಗೆ ಟಿಕೆಟ್ ಗಿಟ್ಟಿಸಿಕೊಳ್ಳಲು ತೆರೆಮರೆಯ ಕಸರತ್ತು- ಬೆಂಗಳೂರಲ್ಲೇ ಬೀಡುಬಿಟ್ಟ ಶಿವಕುಮಾರ ಉದಾಸಿ

truck

ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಭೀಂಡ್ ಜಿಲ್ಲೆಯ ಹಳ್ಳಿ ಸಮೀಪ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಇದೀಗ ಅವರನ್ನು 79ಕಿ.ಮೀ ದೂರದಲ್ಲಿರುವ ಗ್ವಾಲಿಯರ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಇದನ್ನೂ ಓದಿ: ಮಂಡ್ಯದಲ್ಲಿ ಮಳೆ ಅವಾಂತರ – KSRTC ಬಸ್ ನಿಲ್ದಾಣ ಸಂಪೂರ್ಣ ಜಲಾವೃತ

ಮಧ್ಯಪ್ರದೇಶದ ಬರೇಲಿಯ ಮೂಲಕ ಗ್ವಾಲಿಯರ್‍ಗೆ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇದೀಗ ನಾವು ಚಾಲಕನನ್ನು ಬಂಧಿಸಿದ್ದು, ಘಟನೆ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಮನೋಜ್ ಸಿಂಗ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications