ನವದೆಹಲಿ: ಮಥುರಾದ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ (Delhi-Agra Expressway) ಮಂಗಳವಾರ ಬೆಳಗ್ಗೆ ದಟ್ಟವಾದ ಮಂಜಿನಿಂದಾಗಿ ಏಳು ಬಸ್‌ಗಳು ಮತ್ತು ಮೂರು ಕಾರುಗಳು ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿ, 25 ಮಂದಿ ಗಾಯಗೊಂಡಿದ್ದಾರೆ.
ಮಂಜಿನಿಂದಾಗಿ ಸ್ಪಷ್ಟ ಗೋಚರತೆ ಇಲ್ಲದ ಕಾರಣ ವಾಹನಗಳು ಸರಣಿ ಅಪಘಾತದಲ್ಲಿ ಜಖಂಗೊಂಡವು. ಡಿಕ್ಕಿಯ ನಂತರ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿದ್ದು, ಪ್ರಯಾಣಿಕರಲ್ಲಿ ಭಯಭೀತ ವಾತಾವರಣ ಉಂಟಾಯಿತು. ಇದನ್ನೂ ಓದಿ: ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಕೇಸ್; ಸವಣೂರು ಸಿಪಿಐ, ಹೆಡ್ ಕಾನ್‌ಸ್ಟೆಬಲ್ ಅಮಾನತು
ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಶ್ಲೋಕ್ ಕುಮಾರ್ ಅಪಘಾತದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ನಿರ್ಬಂಧಿಸಲಾದ ಹೆದ್ದಾರಿಯನ್ನು ತೆರವುಗೊಳಿಸಲು ಮತ್ತು ಗಂಭೀರ ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಪಘಾತದ ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು ಮತ್ತು ಸ್ಥಳೀಯ ಆಡಳಿತದ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ರಕ್ಷಣಾ ಕಾರ್ಯಾಚರಣೆ ಬಹುತೇಕ ಪೂರ್ಣಗೊಂಡಿದೆ. ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವುದು ಖಚಿತವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸೋಮವಾರ ಬೆಳಗಿನ ಜಾವ ಕೂಡ ದಟ್ಟವಾದ ಮಂಜಿನಿಂದಾಗಿ ಸುಮಾರು 20 ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿತ್ತು. ಇದಕ್ಕೂ ಒಂದು ದಿನದ ಹಿಂದೆ ಇದೇ ರೀತಿಯ ಸರಣಿ ಅಪಘಾತಗಳಾಗಿದ್ದವು. ಇದನ್ನೂ ಓದಿ: 2 ವರ್ಷದ ಮಗು ಮೇಲೆ ಅತ್ಯಾಚಾರಗೈದು ಹತ್ಯೆ – ಅಪರಾಧಿಯ ದಯಾ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ ಮುರ್ಮು

