ಉಡುಪಿ: ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿ ಮುಖ್ಯಸ್ಥ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ(Anant Ambani) ಅವರು ಬೈಂದೂರು ತಾಲೂಕಿನ ಐತಿಹಾಸಿಕ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ(Kollur Sri Mookambika Devi Temple) ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.

ತಮ್ಮ ಕುಟುಂಬದ ಗುರೂಜಿಯವರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅನಂತ ಅಂಬಾನಿ, ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ-ಪುನಸ್ಕಾರಗಳನ್ನು ನೆರವೇರಿಸಿದರು. ದೇವಾಲಯದ ಸಾಂಪ್ರದಾಯಿಕ ಆಚರಣೆಗಳ ಪ್ರಕಾರ ದೇವಿಯ ಕೃಪೆಗೆ ಪಾತ್ರರಾದ ಅವರಿಗೆ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅರ್ಚಕರ ವತಿಯಿಂದ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ಮೂಕಾಂಬಿಕಾ ಸನ್ನಿಧಿಯಲ್ಲಿ ವಿಜಯ್ ಶತ್ರು ಸಂಹಾರ ಸಂಕಲ್ಪ!

ಇತ್ತೀಚಿನ ದಿನಗಳಲ್ಲಿ ಅನಂತ್ ಅಂಬಾನಿ ಅವರು ದೇಶದಾದ್ಯಂತ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಗಮನ ಸೆಳೆದಿದೆ. ಕೇರಳ ಸೇರಿದಂತೆ ವಿವಿಧ ರಾಜ್ಯಗಳ ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ಟೆಂಪಲ್ ರನ್ ನಡೆಸುತ್ತಿರುವ ಅವರು, ಇದೀಗ ಕರಾವಳಿಯ ಪ್ರಸಿದ್ಧ ಶಕ್ತಿಪೀಠವಾದ ಕೊಲ್ಲೂರಿಗೂ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಇದನ್ನೂ ಓದಿ: ʻವಿಜಯʼದ ಪ್ರತೀಕವಾಗಿ ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ
