ಮಂಗಳೂರು: ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ (Kumaradhara River) ಹಾರಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡದ (Dakshina Kannada) ಕುದ್ಮಾರು ಗ್ರಾಮದ ಶಾಂತಿಮೊಗರು ಎಂಬಲ್ಲಿ ನಡೆದಿದೆ.
ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷ ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಶಾಂತಿಮೊಗರು ಸೇತುವೆಯ (Shanthimogaru Bridge) ಮೇಲೆ ಕಾರು ನಿಲ್ಲಿಸಿ ಬಳಿಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೃಷಿ, ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ದೇಶದಲ್ಲೇ ರಾಯಚೂರಿಗೆ ಫಸ್ಟ್ ರ‍್ಯಾಂಕ್
Advertisement
Advertisement
ತೇಲುತ್ತಿದ್ದ ಬಲೂನ್ ಗುರುತಿನ ಆಧಾರದಲ್ಲಿ ಮೃತದೇಹವನ್ನು ಸ್ಥಳೀಯರು ಪತ್ತೆ ಮಾಡಿದ್ದಾರೆ. ಬಳಿಕ ಸ್ಥಳೀಯರು ಮೃತ ದೇಹವನ್ನು ಮೇಲಿತ್ತಿದ್ದಾರೆ. ಮೃತದೇಹ ಬೇಗ ಸಿಗಲಿ ಎಂಬ ಉದ್ದೇಶದಿಂದ ಬಲೂನ್ ಕಟ್ಟಿ ಹಾರಿರುವ ಶಂಕೆ ವ್ಯಕ್ತವಾಗಿದೆ.
Advertisement
Advertisement
ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪ್ರಕರಣ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ಡಬಲ್ ಮರ್ಡರ್ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು