ಕಾರವಾರ: ಗೋವಾದ (Goa) ವೆರ್ಣಾ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪೂರೈಕೆ ಉದ್ಯಮ ನಿರ್ವಹಿಸುತ್ತಿದ್ದ ಕಾರವಾರ ತಾಲೂಕಿನ ಗೋಪಶಿಟ್ಟಾ ಮೂಲದ ಉದ್ಯಮಿ (Businessman) ಶ್ಯಾಮ್ ಪಾಟೀಲ್ ಅವರ ಕುಟುಂಬ ಆತ್ಮಹತ್ಯೆಗೆ (Suicide) ಶರಣಾಗಿದೆ.
ಶ್ಯಾಮ್ ಪಾಟೀಲ್ (40), ಪತ್ನಿ ಜ್ಯೋತಿ ಪಾಟೀಲ್ (37), ಮಗ ಧಕ್ಷ್ ಪಾಟೀಲ್ (12) ಸಾಮೂಹಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಮತ್ತು ಪುತ್ರ ಕಾರವಾರ (Karwar) ನಗರದ ಕೋಡಿಬಾಗದಲ್ಲಿರುವ ಕಾಳಿ ಸೇತುವೆಯಿಂದ ಜಿಗಿದು ಆತ್ನಹತ್ಯೆ ಮಾಡಿಕೊಂಡಿದ್ದು, ಶ್ಯಾಮ್ ಪಾಟೀಲ್ ನಗರದಿಂದ 60 ಕಿ.ಮೀ. ದೂರದಲ್ಲಿರುವ ಗೋವಾ ರಾಜ್ಯದ ಪಾಡಿ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ತಹಶೀಲ್ದಾರ್ ಅನುಮಾನಾಸ್ಪದ ಸಾವು – ಪತ್ನಿ, ಆಕೆ ಸಹೋದರನ ವಿರುದ್ಧ ಕೊಲೆ ಆರೋಪ
Advertisement
Advertisement
ಪುತ್ರ ಹಾಗೂ ಪತ್ನಿಯ ಮೃತದೇಹ ದೇವಬಾಗ ಕಡಲತೀರದಲ್ಲಿ ದೊರೆತಿದೆ. ಶ್ಯಾಮ್ ಮೃತದೇಹ ಪಾಡಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಗುರುವಾರ ನಸುಕಿನ ಜಾವ ದೇವಬಾಗ ಕಡಲತೀರದಲ್ಲಿ ಬಾಲಕನ ಮೃತದೇಹ ಪತ್ತೆಯಾಗಿತ್ತು. ಚಿತ್ತಾಕುಲ ಠಾಣೆ ಪೊಲೀಸರು ತನಿಖೆ ಆರಂಭಿಸಿದ ಬಳಿಕ ಕುಟುಂಬದ ಸದಸ್ಯರು ಸಾಮೂಹಿಕ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಪ್ರೇಮವೈಫಲ್ಯ – ಮನನೊಂದ ಯುವತಿ ಚಿತ್ರಾವತಿ ನದಿಗೆ ಹಾರಿ ಆತ್ಮಹತ್ಯೆ!
Advertisement
Advertisement
ಉದ್ಯಮಿ ಶ್ಯಾಮ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಗಿ ಗೋವಾದ ಕುಕಳ್ಳಿ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ಪತ್ನಿ, ಪುತ್ರ ಆತ್ಮಹತ್ಯೆ ಮಾಡಿಕೊಂಡ ಬಳಿಕ ಶ್ಯಾಮ್ ಇಲ್ಲಿಂದ ಗೋವಾ ಭಾಗಕ್ಕೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಸಂಬಂಧ ಚಿತ್ತಾಕುಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮದುವೆಯಾಗಲು ಹೆಣ್ಣು ಸಿಗದೆ ಮನನೊಂದು ಯುವಕ ಆತ್ಮಹತ್ಯೆ
Web Stories