ಮೈಸೂರು: ಉದ್ಯಮಿ, ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಅಂತ್ಯಕ್ರಿಯೆಯಲ್ಲಿ ತಂದೆ ಗಂಗಯ್ಯ ಹೆಗಡೆ ಅವರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವುದಿಲ್ಲ.
ಸಿದ್ಧಾರ್ಥ್ ಅವರ ತಂದೆ ಗಂಗಯ್ಯ ಹೆಗಡೆ ಅವರು ಕೋಮಾ ಪರಿಸ್ಥಿತಿಯಲ್ಲಿದ್ದು, ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಗಯ್ಯ ಹೆಗಡೆ ದಾಖಲಾತಿಯನ್ನು ಆಸ್ಪತ್ರೆ ಸಿಬ್ಬಂದಿ ಗೌಪ್ಯವಾಗಿಟ್ಟಿದ್ದರು.
Advertisement
ಗೋಪಾಲಗೌಡ ಆಸ್ಪತ್ರೆ ಮಾಲೀಕ ಸಂತೃಪ್ತ ಹೆಗ್ಡೆ ಅವರು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಸಂಬಂಧಿ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳು ಹಾಗೂ ಸಾರ್ವಜನಿಕರಿಗೆ ಸಿದ್ಧಾರ್ಥ್ ತಂದೆ ಕುರಿತು ಮಾಹಿತಿ ನೀಡದೇ ಗೌಪ್ಯವಾಗಿ ಇಟ್ಟಿದ್ದರು.
Advertisement
Advertisement
ಈ ಬಗ್ಗೆ ಆಸ್ಪತ್ರೆಯಲ್ಲಿ ಮಾಹಿತಿ ವಿಚಾರಿಸಿದಾಗ ಗಂಗಯ್ಯ ಹೆಗಡೆ ಅವರು ಭಾನುವಾರವೇ ಡಿಸ್ಚಾರ್ಜ್ ಆಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಗಂಗಯ್ಯ ಅವರಿಗೆ ಆಸ್ಪತ್ರೆ ಸಿಬ್ಬಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಹೀಗಾಗಿ ಗಂಗಯ್ಯ ಹೆಗಡೆ ಅವರು ಸಿದ್ದಾರ್ಥ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದು ಬಂದಿದೆ.
Advertisement
ಸೋಮವಾರ ರಾತ್ರಿ ಜಪ್ಪಿನಮೊಗರು ಎಂಬಲ್ಲಿ ನೇತ್ರಾವತಿ ನದಿಗೆ ನಿರ್ಮಿಸಿರುವ ಸೇತುವೆ ಬಳಿ ಕಾಣೆಯಾಗಿದ್ದ ಸಿದ್ಧಾರ್ಥ್, ಸುಮಾರು 36 ಗಂಟೆಗಳ ಶೋಧ ಕಾರ್ಯದ ನಂತರ ಇಂದು ಬೆಳಗ್ಗೆ ಸುಮಾರು 6.30ರ ವೇಳೆಗೆ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳೀಯ ಮೀನುಗಾರರು ಮೀನು ಹಿಡಿಯಲು ಹೋದಾಗ ಮಂಗಳೂರು- ಉಳ್ಳಾಲ ನಡುವೆ ಇರುವ ನೇತ್ರಾವತಿ ನದಿ ಸಮೀಪದ ಹೊಯಿಗೆ ಬಜಾರ್ ಎಂಬ ಪ್ರದೇಶದಲ್ಲಿ ಸಿದ್ಧಾರ್ಥ್ ಶವ ದೊರೆತಿದೆ.
https://www.youtube.com/watch?v=i3MTQLbm1KE