ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಸಿಂಧು ಮುಡಿಗೆ

Public TV
1 Min Read
P. V. Sindhu

ಬಾಸೆಲ್: ಭಾರತದ ಶೇಟ್ಲರ್ ಪಿ.ವಿ.ಸಿಂಧು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗೆ ಮುತ್ತಿಟ್ಟಿದ್ದಾರೆ.

ಪಿ.ವಿ.ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆಯನ್ನು ಬರೆದಿದ್ದಾರೆ. ಈ ಹಿಂದೆ ಎರಡು ಬಾರಿ ಫೈನಲ್ ಪ್ರವೇಶ ಮಾಡಿದ್ದರು. ಆದರೆ ಪ್ರಶಸ್ತಿಯಿಂದ ವಂಚಿತರಾಗಿದ್ದ ಅವರು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದರು.

24 ವರ್ಷದ ಹೈದರಾಬಾದ್‍ನ ಆಟಗಾರ್ತಿ ಪಿ.ವಿ.ಸಿಂಧು ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಜಪಾನ್‍ನ ಒಕುಹಾರ ಅವರನ್ನು 21-7, 21-7 ಗೇಮ್‍ಗಳಿಂದ ಸೋಲಿಸಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಸಿಂಧು ಅವರು 2013 ಮತ್ತು 2014ರಲ್ಲಿ ಕಂಚಿನ ಪದಕ ಗೆದ್ದಿದ್ದರು. 2017 ಹಾಗೂ 2018ರಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದರು. ಆದರೆ ಈ ಬಾರಿಯ ಫೈಲನ್ ಪ್ರವೇಶದಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಷಿಪ್ ಪ್ರಶಸ್ತಿ ಗೆದ್ದಿದ್ದಾರೆ.

ಸಿಂಧು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಶನಿವಾರ ನಡೆದ ಸೆಮಿಫೈನಲ್ ಕದನದಲ್ಲಿ ಚೀನಾದ ಚೆನ್ ಯು ಫೀ ವಿರುದ್ಧ ಕೇವಲ 40 ನಿಮಿಷಗಳಲ್ಲಿ 21-7, 21-14 ಅಂತರದ ಸುಲಭ ಗೆಲುವು ಸಾಧಿಸಿ ಪ್ರಶಸ್ತಿ ಸುತ್ತನ್ನು ಪ್ರವೇಶಿಸಿದ್ದರು.

ಪುರುಷರ ಸಿಂಗಲ್ಸ್ ಸೆಮಿಫೈನಲ್‍ನಲ್ಲಿ ಸಾಯಿ ಪ್ರಣೀತ್ ಸೋಲನುಭವಿಸಿದ್ದು ಕೂಟದಿಂದ ನಿರ್ಗಮಿಸಿದ್ದಾರೆ. ಜಪಾನಿನ ಕೆಂಟೊ ಮೊಮೊಟ 21-13, 21-8 ರಿಂದ ಪ್ರಣೀತ್‍ರನ್ನು ಸುಲಭದಲ್ಲಿ ಮಣಿಸಿದರು. ಆದರೂ ಪ್ರಣೀತ್ ಕಂಚಿನ ಪದಕ್ಕೆ ತೃಪ್ತಿಪಟ್ಟಿದ್ದಾರೆ.

ಭಾರತದ ದಂತಕತೆ ಪ್ರಕಾಶ್ ಪಡುಕೋಣೆ ಅವರು 1983ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಈ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ ಎನಿಸಿದ್ದರು. ಸದ್ಯ 26 ವರ್ಷಗಳ ನಂತರ ಭಾರತಕ್ಕೆ ಒಲಿದ ಮೊದಲ ಪದಕ ಇದಾಗಿದೆ.

Share This Article
Leave a Comment

Leave a Reply

Your email address will not be published. Required fields are marked *