ಬೆಂಗಳೂರು: ಉಪ ಚುನಾವಣೆಗೆ ಭರ್ಜರಿ ತಯಾರಿ ನಡೆದಿದ್ದು, ಕೆ.ಆರ್.ಪುರ ಅನರ್ಹ ಶಾಸಕ ಭೈರತಿ ಬಸವರಾಜ್ ಈಗಿನಿಂದಲೇ ಮತದಾರರನ್ನು ಮನವೊಲಿಸಲು ಯತ್ನಿಸುತ್ತಿದ್ದಾರೆ. ಇದರ ಭಾಗವಾಗಿ ಗೌರಿ ಹಬ್ಬಕ್ಕೆ ಸೀರೆ, ಅರಿಶಿನ, ಕುಂಕುಮ ಹಂಚುತ್ತಿದ್ದಾರೆ ಆರೋಪ ಕೇಳಿ ಬಂದಿದೆ.
ಗೌರಿ ಗಣೇಶ ಹಬ್ಬದ ಗಿಫ್ಟ್ ನೀಡುವ ಮೂಲಕ ತದಾರರ ಮನವೊಲಿಸಲು ಭೈರತಿ ಮುಂದಾಗಿದ್ದಾರೆ. ಕೆ.ಆರ್.ಪುರ ಕ್ಷೇತ್ರದ ಬಸವನಪುರ ವಾರ್ಡ್‍ನಲ್ಲಿ ಅರಿಶಿನ ಕುಂಕುಮ ಬಳೆ ಸೀರೆ ಹಂಚುತ್ತಿರುವ ವಿಡಿಯೋ ವೈರಲ್ ಆಗಿದೆ. ಭೈರತಿ ಅವರು ತಮ್ಮ ಬೆಂಬಲಿಗರ ಮೂಲಕ ಈ ರೀತಿ ಮಾಡಿಸುತ್ತಿದ್ದಾರೆ. ಮುಂಬರುವ ಉಪ ಚುನಾವಣೆಗೆ ಈಗಲೇ ಸೀರೆ ಹಂಚುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಭೈರತಿ ಬಸವರಾಜ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸರ್ಕಾರ ಬೀಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅನರ್ಹ ಶಾಸಕರ ಅರ್ಜಿ ವಿಚಾರಣೆ ಸುಪ್ರೀಂನಲ್ಲಿದೆ. ಸುಪ್ರೀಂ ಕೋರ್ಟ್ ನೀಡಲಿರುವ ತೀರ್ಪಿನ ಮೇಲೆ ಅನರ್ಹ ಶಾಸಕರ ಭವಿಷ್ಯ ನಿಂತಿದೆ.