ಶಿವಮೊಗ್ಗ: ಜಿಲ್ಲೆಯಲ್ಲಿ ಲೋಕಸಭಾ ಉಪ ಚುನಾವಣೆ ಹಿನ್ನೆಲೆ ಬಿಜೆಪಿ ಪಕ್ಷದವರು ಎಲ್ಲೆಡೆ ಭರ್ಜರಿ ಪ್ರಚಾರವನ್ನು ಆರಂಭಿದ್ದಾರೆ.
ಬಿಜೆಪಿ ಲೋಕಸಭಾ ಕ್ಷೇತ್ರದಾದ್ಯಂತ ಸಾಲು ಸಾಲು ಬಹಿರಂಗ ಸಭೆ ನಡೆಸುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತವರು ಕ್ಷೇತ್ರ ಶಿಕಾರಿಪುರದಿಂದ ಪ್ರಚಾರ ಆರಂಭವಾಗಿದ್ದು, ಪ್ರಚಾರ ಸಭೆಯಲ್ಲಿ ಬಿಜೆಪಿ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ.
ಶಿಕಾರಿಪುರದ ಮಂಗಳ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಮಾಜಿ ಸ್ಪೀಕರ್ ಡಿ.ಹೆಚ್.ಶಂಕರಮೂರ್ತಿ, ಕೆ.ಎಸ್. ಈಶ್ವರಪ್ಪ, ವಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿಧಾನಪರಿಷತ್ ಸದಸ್ಯ ರುದ್ರೇಗೌಡ ಸೇರಿದಂತೆ ಹಲವಾರು ನಾಯಕರು ಭಾಗಿಯಾಗಿದ್ದರು.
ಬಹಿರಂಗ ಸಭೆಯಲ್ಲಿ ಮತಯಾಚನೆ ಮಾಡಿದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ಉಪ ಚುನಾವಣೆ ಬಿಜೆಪಿಗೆ ಮಹತ್ವ ಪಡೆದುಕೊಂಡಿದೆ. 8 ವಿಧಾನಸಭಾ ಕ್ಷೇತ್ರಗಳು ನಮ್ಮ ವ್ಯಾಪ್ತಿಯಲ್ಲಿ ಬಂದಿರೋದು ನನ್ನ ಪುಣ್ಯ. ಅತೀ ಹೆಚ್ಚು ಮತಗಳ ಮೂಲಕ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv