DharwadDistrictsKarnatakaLatestMain Post

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬೊಮ್ಮಾಯಿ

ಹುಬ್ಬಳ್ಳಿ: ಹಾನಗಲ್ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆ ಇಂದು ಪ್ರಚಾರ ಕೈಗೊಳ್ಳುತ್ತಿದ್ದೇನೆ. ಸಿಂದಗಿ ಕ್ಷೇತ್ರದಲ್ಲಿಯೂ ಪ್ರಚಾರ ಮಾಡುತ್ತೇನೆ. ಈ ಎರಡೂ ಕ್ಷೇತ್ರಗಳಲ್ಲಿ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಮಾಡಿರುವ ಆರೋಪದ ಸುಳ್ಳು. ಸಂಗೂರು ಸಕ್ಕರೆ ಕಾರ್ಖಾನೆಗೆ ತನ್ನದೇ ಆದ ಇತಿಹಾಸವಿದೆ. ಆ ಕಾರ್ಖಾನೆ ಮುಚ್ಚುವಲ್ಲಿ ಕಾಂಗ್ರೆಸ್ ಪಕ್ಷದವರ ಕೊಡುಗೆ ಇದೆ. ಪರಿಸ್ಥಿತಿಯನ್ನು ಪರಿಶೀಲನೆ ಮಾಡಿ ರೈತರ ಕಬ್ಬು ಅರೆಯುವಂತೆ ಮಾಡಿದ್ದು ಬಿಜೆಪಿ ಸರ್ಕಾರ ಎಂದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಸಿದ್ದರಾಮಯ್ಯ ಒಬ್ಬರೇ ನಾಯಕ: ಅನ್ಸಾರಿ

ಹಾನಗಲ್ ಅಳಿಯ ಬಸವರಾಜ ಬೊಮ್ಮಾಯಿ ಏನು ಕೊಟ್ಟಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಪ್ರಶ್ನೆಗೆ ಸಿಎಂ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿ, 2,400 ಕೋಟಿ ರೂಪಾಯಿ ಹಣವನ್ನು ಹಾನಗಲ್‍ಗೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 2,400 ಕೋಟಿ ಎಲ್ಲಿದೆ? ಎಲ್ಲಿಂದ ಕೊಟ್ಟಿದ್ದಾರೆ ಎಂದು ತೋರಿಸಲಿ. ಆಗ ನಾನು ಏನು ಕೊಟ್ಟಿದ್ದೇನೆ ಎಂದು ಸೂಕ್ತ ಉತ್ತರ ನೀಡುತ್ತೇನೆ ಎಂದು ನುಡಿದರು. ಇದನ್ನೂ ಓದಿ: ನಿಮ್ಮಂಥ ‘ಮನೆಮುರುಕರು’ ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಅಂದ್ಕೊಂಡಿದ್ದಾರೆ – ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ

Leave a Reply

Your email address will not be published. Required fields are marked *

Back to top button