ರಾಮನಗರ: ಮುಖ್ಯಮಂತ್ರಿಯವರ ರಾಜೀನಾಮೆಯಿಂದ ತೆರವಾಗಿರುವ ರಾಮನಗರ ಕ್ಷೇತ್ರಕ್ಕೆ ಪತ್ನಿ ಅನಿತಾ ಅವರನ್ನು ಕಣಕ್ಕೆ ಇಳಿಸಲು ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ.
ಇನ್ನು ಕೆಲವೇ ದಿನಗಳಲ್ಲಿ ರಾಮನಗರಕ್ಕೆ ಉಪಚುನಾವಣೆ ನಡೆಯಲಿದ್ದು, ಪತ್ನಿ ಅನಿತಾ ಅವರನ್ನು ಕಣಕ್ಕೆ ಇಳಿಸಲು ಸಿಎಂ ಕುಮಾರಸ್ವಾಮಿ ಒಲವು ತೋರಿದ್ದಾರೆ. ಮಗ ನಿಖಿಲ್ ಅಥವಾ ಅನಿತಾ ಅವರು ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿತ್ತು. ಇದೀಗ ಅನಿತಾ ಅವರು ಕಣಕ್ಕೆ ಇಳಿಯುವುದು ಬಹುತೇಕ ಅಂತಿಮವಾಗಿದ್ದು, ಚುನಾವಣೆ ಘೋಷಣೆ ಬಳಿಕ ಅನಿತಾ ಕುಮಾರಸ್ವಾಮಿ ಅವರ ಹೆಸರನ್ನು ಜೆಡಿಎಸ್ ಅಧಿಕೃತ ಮಾಡಲಿದೆ ಎನ್ನಲಾಗಿದೆ.
Advertisement
Advertisement
ರಾಮನಗರ ವಿಧಾನಸಭಾ ಕ್ಷೇತ್ರದಿಂದ ಹೆಚ್.ಡಿ.ಕುಮಾರಸ್ವಾಮಿ ಗೆಲುವು ಸಾಧಿಸಿದ್ರು. ಆದ್ರೆ ಇತ್ತ ಚನ್ನಪಟ್ಟಣದಲ್ಲಿಯೂ ಗೆಲುವು ಸಾಧಿಸಿದ್ದರಿಂದ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಈ ಮೊದಲು ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹೆಚ್.ಲೀಲಾವತಿ ಸ್ಪರ್ಧೆ ಮಾಡಿದ್ದರು. ಚುನಾವಣೆಗೂ ಮುನ್ನವೇ ಸಿ.ಪಿ ಯೋಗೇಶ್ವರ್ ರಾಮನಗರದತ್ತ ಒಲವು ತೋರಿದ್ದರು.
Advertisement
ಇತ್ತ ಅನಿತಾ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದಂತೆಯೇ ದೇವೇಗೌಡರ ಮುಂದೆ ಭವಾನಿ ರೇವಣ್ಣ ಅವರು ಹೆಚ್‍ಡಿಕೆ ವಿರುದ್ಧ ಅಸಮಧಾನ ಹೊರಹಾಕಿದ್ದರು. ಈ ಹಿಂದೆ ನಮ್ಮ ಕುಟುಂಬದಿಂದ ಇಬ್ಬರು ಮಾತ್ರ ಸ್ಪರ್ಧೆ, ಯಾರು ಸ್ಪರ್ಧೆಯಿಲ್ಲ ಎಂದಿದ್ದರು. ಹಾಗಾಗಿಯೇ ನನ್ನ ಮಗ ವಿಧಾನಸಭಾ ಚುನಾವಣೆಗೆ ನಿಲ್ಲೋದು ತಪ್ಪಿತ್ತು. ಈಗ ರಾಮನಗರದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಯಾವ ಲೆಕ್ಕದಿಂದ ಅಂತ ಪ್ರಶ್ನಿಸಿದ್ದಾರೆ ಎಂದು ಹೇಳಲಾಗಿದೆ.
Advertisement
ನನ್ನ ಮಗ ಪ್ರಜ್ವಲ್ ಭವಿಷ್ಯಕ್ಕೆ ಕಲ್ಲು ಹಾಕುವ ಪ್ರಯತ್ನ ನಡೆಯುತ್ತಿದೆ. ನೀವು ನೋಡಿದ್ರೆ ಲೋಕಸಭೆ ಚುನಾವಣೆ ಅಂತೇಳಿ ಸಮಾಧಾನ ಮಾಡಿದ್ದೀರಾ. ಹಿಂಗೆ ಆದ್ರೆ ನಾವು ಎಲ್ಲಿಗೆ ಹೋಗಬೇಕು, ನನ್ನ ಮಗನಿಗೆ ಅವಕಾಶ ಮಾಡಿಕೊಡಿ ಅಂತ ದೇವೇಗೌಡರ ಮುಂದೆಯೇ ಪ್ರಜ್ವಲ್ ಪರ ಭವಾನಿ ರೇವಣ್ಣ ಬ್ಯಾಟಿಂಗ್ ಮಾಡಿದ್ದರು ಎಂಬುದಾಗಿ ಮೂಲಗಳಿಂದ ತಿಳಿದುಬಂದಿತ್ತು.