ಅನರ್ಹರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ: ಸಂಜೀವ್‍ ಕುಮಾರ್

Public TV
2 Min Read
Sanjeev Kumar

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡುತ್ತಿದಂತೆ ರಾಜ್ಯ ಚುನಾವಣಾ ಆಯೋಗ ಮುಖ್ಯಸ್ಥ ಸಂಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಉಪಚುನಾವಣೆಯ ಕುರಿತು ಹೆಚ್ಚಿನ ಮಾಹಿತಿ ನೀಡಿದ್ದಾರೆ.

ಈಗಾಗಲೇ ಚುನಾವಣೆ ನಡೆಯಲಿರುವ ಕ್ಷೇತ್ರಗಳ ಜಿಲ್ಲೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. 24 ಗಂಟೆ ಒಳಗೆ ನಡೆಸಬೇಕಾದ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳುತ್ತಾರೆ. ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಇದನ್ನು ಓದಿ: ಬೈ ಎಲೆಕ್ಷನ್ ಘೋಷಣೆ ಬೆನ್ನಲ್ಲೇ ಅನರ್ಹರ ಜೊತೆ ಬಿಎಸ್‍ವೈ ಮೀಟಿಂಗ್

rebel congress jds resigns B 1 1000x329 1 768x422 1

ಸೆ.23ರ ಸೋಮವಾರ ಅಧಿಸೂಚನೆ ಹೊರ ಬೀಳಲಿದ್ದು, ಸೆ.30 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು ಕೊನೆ ದಿನವಾಗಿದೆ. ಅ.01 ನಾಮಪತ್ರ ಪರಿಶೀಲನೆ ನಡೆದರೆ, ಅ.3 ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಅ.21 ಮತದಾನ, ಅ.24 ರಂದು ಫಲಿತಾಂಶ ಬರಲಿದೆ. ಅ.27 ವೇಳೆಗೆ ಚುನಾವಣಾ ಕಾರ್ಯ ಪೂರ್ಣಗೊಳ್ಳಲಿದೆ.

15 ಕ್ಷೇತ್ರಗಳ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಹಾಕುವ 7 ಸಾವಿರ ಮಂದಿ ಇದ್ದು, ಒಟ್ಟಾರೆ 37,49,047 ಮತದಾರರು ಭಾಗವಹಿಸಲಿದ್ದಾರೆ. 4,185 ಮತ ಕೇಂದ್ರಗಳು ಇರಲಿದೆ. ಚುನಾವಣೆಯಲ್ಲಿ 22,598 ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ನೀಡಬೇಕಾದ ತರಬೇತಿಯನ್ನು ಶೀಘ್ರವೇ ನೀಡುತ್ತೇವೆ ಎಂದು ಆಯೋಗ ಮುಖ್ಯಸ್ಥರು ತಿಳಿಸಿದರು. ಇದನ್ನು ಓದಿ: ಅನರ್ಹರಿಗೆ ಬಿಗ್‍ಶಾಕ್ – ಅನರ್ಹ ಶಾಸಕರ ಮುಂದಿನ ಆಯ್ಕೆಗಳೇನು?

Sanjeev Kumar a

ಮಸ್ಕಿ ಹಾಗೂ ಆರ್.ಆರ್ ನಗರ ಚುನಾವಣೆ ಘೋಷನೆಯಾಗದಿರುವ ಪ್ರತಿಕ್ರಿಯೆ ನೀಡಿದ ಆಯೋಗದ ಮುಖ್ಯಸ್ಥರು, ಎರಡು ಕ್ಷೇತ್ರಗಳ ವಿಚಾರವಾಗಿ 2018 ರಲ್ಲಿ ತಕರಾರು ಅರ್ಜಿಗಳು ನ್ಯಾಯಾಲಯದಲ್ಲಿ ಬಾಕಿ ಇರುವುದರಿಂದ ಚುನಾವಣೆ ದಿನಾಂಕ ಘೋಷಣೆಯಾಗಿಲ್ಲ. ಒಂದೊಮ್ಮೆ ಸುಪ್ರೀಂ ಕೋರ್ಟಿನಿಂದ ಸ್ಪೀಕರ್ ಆದೇಶಕ್ಕೆ ತಡೆಯಾಜ್ಞೆ ಬಂದರೆ ಈಗಿನ ಚುನಾವಣಾ ವೇಳಾಪಟ್ಟಿಗೆ ಧಕ್ಕೆಯಾಗಲಿದೆ ಎಂಬ ಬಗ್ಗೆ ಯಾವುದೇ ಸ್ಪಷ್ಟನೆ ನೀಡಲಿಲ್ಲ. ಆದರೆ ಸ್ಪೀಕರ್ ಆದೇಶ ಚುನಾವಣೆಗೂ ಅನ್ವಯವಾಗುವ ಹಿನ್ನೆಲೆಯಲ್ಲಿ ಈ ಚುನಾವಣೆಯಲ್ಲಿ ಅನರ್ಹರಿಗೆ ಸ್ಪರ್ಧೆಗೆ ಅವಕಾಶವಿಲ್ಲ ಎಂದರು.

ಉಪಚುನಾವಣೆಯಲ್ಲಿ ಒ-3 ಇವಿಎಂ ಹಾಗೂ ವಿವಿ ಪ್ಯಾಟ್ ಬಳಕೆ ಮಾಡಲಾಗುತ್ತದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರದಲ್ಲಿ ಇವುಗಳನ್ನು ಬಳಕೆ ಮಾಡಲಾಗಿತ್ತು. ಈ ಬಾರಿ 8,370 ವಿವಿ ಪ್ಯಾಟ್ ಅಗತ್ಯವಿದ್ದು, ಬೇರೆ ಬೇರೆ ಜಿಲ್ಲೆಗಳಿಂದ ಇವುಗಳಿಂದ ಪಡೆಯಲಾಗುತ್ತಿದೆ ಎಂದು ಚುನಾವಣೆ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು.

ಇದೇ ವೇಳೆ ಚುನಾವಣೆ ನಡೆಯುವ ಪ್ರವಾಹ ಪೀಡಿತ ಕ್ಷೇತ್ರಗಳಿಗೆ ಭೇಟಿ ನೀಡಬಹುದು. ಆದರೆ ಸಚಿವರಿಗೆ ಹಾಗೂ ರಾಜಕೀಯ ಪ್ರತಿನಿಧಿಗಳಿಗೆ ಜಿಲ್ಲೆಯ ಕಾರ್ಯಕ್ರಮಗಳಿಗೆ ನೀತಿ ಸಂಹಿತೆ ಜಾರಿಯಾಗಲಿದೆ. ದಸರಾದಲ್ಲಿ ರಾಜಕೀಯ ವ್ಯಕ್ತಿಗಳಿಗೆ ಸ್ವಲ್ಪ ನಿಯಮಗಳು ಜಾರಿಯಾಗಲಿದೆ ಎಂದು ವಿವರಿಸಿದರು. ಇದನ್ನು ಓದಿ: ಕರ್ನಾಟಕದ 2 ಕ್ಷೇತ್ರಗಳಿಗೆ ಉಪಚುನಾವಣೆ ಇಲ್ಲ

Share This Article
Leave a Comment

Leave a Reply

Your email address will not be published. Required fields are marked *