Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾವಣಗೆರೆಯಲ್ಲಿ ʻಕೈʼಗೆ ಬಂಡಾಯದ ಬಿಸಿ – ಸಾಮೂಹಿಕ ನಾಮಪತ್ರ ಸಲ್ಲಿಕೆಗೆ ಮುಸ್ಲಿಂ ಮುಖಂಡರ ನಿರ್ಧಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ದಾವಣಗೆರೆಯಲ್ಲಿ ʻಕೈʼಗೆ ಬಂಡಾಯದ ಬಿಸಿ – ಸಾಮೂಹಿಕ ನಾಮಪತ್ರ ಸಲ್ಲಿಕೆಗೆ ಮುಸ್ಲಿಂ ಮುಖಂಡರ ನಿರ್ಧಾರ

Davanagere

ದಾವಣಗೆರೆಯಲ್ಲಿ ʻಕೈʼಗೆ ಬಂಡಾಯದ ಬಿಸಿ – ಸಾಮೂಹಿಕ ನಾಮಪತ್ರ ಸಲ್ಲಿಕೆಗೆ ಮುಸ್ಲಿಂ ಮುಖಂಡರ ನಿರ್ಧಾರ

Public TV
Last updated: March 22, 2026 8:28 pm
Public TV
Share
2 Min Read
Davanagere 2
SHARE

ದಾವಣಗೆರೆ: ಜಿಲ್ಲೆಯ ದಕ್ಷಿಣ ಕ್ಷೇತ್ರದ ಉಪಸಮರ ಈಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಶಾಮನೂರು ಮೊಮ್ಮಗ ಸಮರ್ಥ್‌ಗೆ (Samarth Shamanur) ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ, ಕ್ಷೇತ್ರದಲ್ಲಿ ಬಂಡಾಯದ ಬಾವುಟ ಹಾರಿದೆ.

ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಬೇಡಿಕೆ ಕಡೆಗಣಿಸಿದ್ದಕ್ಕೆ ಮುಸ್ಲಿಂ ಮುಖಂಡರು (Muslim Leaders) ಕೆಂಡಾಮಂಡಲವಾಗಿದ್ದಾರೆ. ಈ ಬಾರಿ ಕಾಂಗ್ರೆಸ್‌ಗೆ (Congress) ತಕ್ಕ ಪಾಠ ಕಲಿಸ್ತೀವಿ ಎಂದು ಎಚ್ಚರಿಕೆ ನೀಡಿರುವ ಮುಖಂಡರು, ಇಂದು ಸಾಮೂಹಿಕವಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆ ಟಿಕೆಟ್‌ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ: ಎಸ್‌.ಎಸ್‌.ಮಲ್ಲಿಕಾರ್ಜುನ್‌

s.s.mallikarjun b form

ಶಾಮನೂರು ಕೋಟೆಯ ಪೈಟ್ ಹೇಗಿದೆ?
ದಾವಣಗೆರೆ ದಕ್ಷಿಣ ಅಂದ್ರೆ ಅದು ಶಾಮನೂರು ಕುಟುಂಬದ ಸಾಮ್ರಾಜ್ಯ ಎಂಬ ಮಾತಿದೆ. ಇದೇ ನಂಬಿಕೆಯ ಮೇಲೆ ಹೈಕಮಾಂಡ್ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಅವರಿಗೆ ಮಣೆ ಹಾಕಿದೆ. ಆದರೆ, ಈ ನಿರ್ಧಾರ ಈಗ ಕೈ ಪಾಳಯದಲ್ಲಿ ಬೆಂಕಿ ಹಚ್ಚಿದೆ. ಕ್ಷೇತ್ರದಲ್ಲಿ ನಿರ್ಣಾಯಕ ಸಂಖ್ಯೆಯಲ್ಲಿರುವ ಅಲ್ಪಸಂಖ್ಯಾತ ಮತದಾರರನ್ನ ಹೈಕಮಾಂಡ್ ನಿರ್ಲಕ್ಷಿಸಿದೆ ಎಂಬುದು ಮುಸ್ಲಿಂ ಮುಖಂಡರ ನೇರ ಆರೋಪ. ಇದನ್ನೂ ಓದಿ: ಉಪ ಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ: ಡಿಕೆಶಿ

Davanagere 3

ನಮ್ಮನ್ನ ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ತೀರಿ, ಅಧಿಕಾರ ಕೊಡಲ್ಲ ಎಂದು ಮುಖಂಡರು ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ಅಸಮಾಧಾನ ಕೇವಲ ಮಾತಿಗೆ ಸೀಮಿತವಾಗಿಲ್ಲ. ಇಂದು ಹತ್ತಾರು ಸಂಖ್ಯೆಯಲ್ಲಿ ಮುಸ್ಲಿಂ ಮುಖಂಡರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದಾರೆ. ಸಚಿವ ಜಮೀರ್ ಅಹಮ್ಮದ್ ಬೆಂಬಲಿತ ಪಡೆಯೂ ಈ ಬಂಡಾಯದಲ್ಲಿ ಒಳಗೊಳಗೇ ಕೈಜೋಡಿಸಿದೆಯಾ ಎಂಬ ಅನುಮಾನ ದಟ್ಟವಾಗಿದೆ. ಅದರಲ್ಲೂ ಕಾಂಗ್ರೆಸ್‌ ಮುಖಂಡ ಸಾಧಿಕ್ ಪೈಲ್ವಾನ್ ಈ ಬಾರಿ ಪ್ರಭಲವಾಗಿ ನಿಂತಿದ್ದು, ನಮ್ಮ ಸಮುದಾಯಕ್ಕೆ ಗೌರವ ಸಿಗದ ಕಡೆ ನಾವೇಕೆ ಇರಬೇಕು ಎಂದು ಪ್ರಶ್ನಿಸಿದ್ದಾರೆ. ಸಮರ್ಥ್‌ಗೆ ಸೋಲಿನ ರುಚಿ ತೋರಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಇದರಿಂದ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಬ್ಯಾಂಕ್‌ಗೆ ದೊಡ್ಡ ಮಟ್ಟದ ಪೆಟ್ಟು ಬೀಳುವ ಲಕ್ಷಣಗಳು ದಟ್ಟವಾಗಿವೆ.

Davanagere

ಇನ್ನು ಕಾಂಗ್ರೆಸ್ ಸರ್ಕಾರದ ವಿರುದ್ಧ ದಾವಣಗೆರೆಯ ಅಖ್ತಾರ್ ರಾಜ್ ಸರ್ಕಲ್‌ನಲ್ಲಿ ಸಾವಿರಾರು ಮುಸ್ಲಿಂ ಮುಖಂಡರು ಪ್ರತಿಭಟನೆ ನಡೆಸಿದರು. ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಸಾಕಷ್ಟು ಮನವಿ ಮಾಡಿದ್ರು ನಮ್ಮ ಮನವಿ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಕೇವಲ ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡಿದೆ. ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಿಎಂ ಸಿದ್ದರಾಮಯ್ಯ ಡಿಕೆಶಿ ವಿರುದ್ದ ಧಿಕ್ಕಾರ ಕೂಗಿದರು.

ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಸಚಿವ ಎ.ಎಸ್ ಮಲ್ಲಿಕಾರ್ಜುನ್ ಎಲ್ಲಾರು ಈಗ ಸಿಟ್ಟಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಬಂಡಾಯ ಎಲ್ಲಾ ಶಮನವಾಗುತ್ತೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆ ದಕ್ಷಿಣ ಉಪಚುನಾವಣೆ; ಶಾಮನೂರು ಮೊಮ್ಮಗನಿಗೆ ಟಿಕೆಟ್‌ ಘೋಷಿಸಿದ ಕಾಂಗ್ರೆಸ್‌

ದಶಕಗಳಿಂದ ಕಾಂಗ್ರೆಸ್‌ನ ಶಕ್ತಿಯಾಗಿದ್ದ ಮುಸ್ಲಿಂ ಮತದಾರರು ಈಗ ಕೈ ಬಿಟ್ಟರೆ, ಸಮರ್ಥ್ ಹಾದಿ ಸುಗಮವಾಗಿರುವುದಿಲ್ಲ. ಅಸಮಾಧಾನಿತರನ್ನ ಶಾಂತಗೊಳಿಸಲು ಸಚಿವ ಮಲ್ಲಿಕಾರ್ಜುನ್ ಮುಂದಾಗ್ತಾರಾ ಅಥವಾ ಈ ಬಂಡಾಯ ಕಾಂಗ್ರೆಸ್ ಕೋಟೆಯನ್ನು ಧೂಳೀಪಟ ಮಾಡುತ್ತಾ ಎನ್ನುವುದು ಕಾದು ನೋಡಬೇಕಿದೆ.

TAGGED:congressDavanagere SouthDK ShivakumarMuslim LeadersSamarth ShamanurSS Mallikarjunಎಸ್ ಎಸ್ ಮಲ್ಲಿಕಾರ್ಜುನ್ಕಾಂಗ್ರೆಸ್ದಾವಣಗೆರೆ ದಕ್ಷಿಣಸಮರ್ಥ್‌ ಶಾಮನೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
18 minutes ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
1 hour ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
1 hour ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
1 hour ago
mahindra car 1
Bengaluru City

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ನೀಡಿ ಕಾರ್ ಶೋರೂಂ ಸಿಬ್ಬಂದಿ ಎಡವಟ್ಟು – 4 ವಾಹನಗಳಿಗೆ ಡಿಕ್ಕಿ

Public TV
By Public TV
1 hour ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?