– ಸಂಡೂರಿಗೆ ಜಮೀರ್, ಶಿಗ್ಗಾಂವಿಗೆ ಈಶ್ವರ್ ಖಂಡ್ರೆ ಉಸ್ತುವಾರಿ
ಬೆಂಗಳೂರು: ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ (Channapatna) ಮೂರು ಕ್ಷೇತ್ರಗಳನ್ನು ಗೆಲ್ಲಲು ತಯಾರಿ ಮಾಡಿಕೊಳ್ಳುವ ಬಗ್ಗೆ ಚರ್ಚೆಯಾಗಿದ್ದು, ಮೂರು ಕ್ಷೇತ್ರಗಳಿಗೆ ಉಸ್ತುವಾರಿ ನೇಮಕ ಮಾಡಲಾಗಿದೆ ಎಂದು ಸಚಿವ ಚೆಲುವರಾಯ ಸ್ವಾಮಿ (Cheluvarayaswamy) ಹೇಳಿದ್ದಾರೆ.
ಕರ್ನಾಟಕದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆ, ಜಾತಿ ಜನಗಣತಿ, ಮೀಸಲಾತಿ ವಿಚಾರ ಸೇರಿ ಹಲವು ವಿಷಯಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಕಾವೇರಿ ನಿವಾಸದಲ್ಲಿ ಸಭೆ ನಡೆಸಲಾಗುತ್ತಿದೆ. ಸಭೆಗೆ ಸಚಿವರಾದ ಡಿ.ಕೆ.ಶಿವಕುಮಾರ್, ಬೈರತಿ ಸುರೇಶ್, ಪ್ರೀಯಾಂಕ್ ಖರ್ಗೆ, ಜಮೀರ್ ಅಹಮದ್, ಶರಣ ಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಎಂ.ಸಿ ಸುಧಾಕರ್, ದಿನೇಶ್ ಗುಂಡೂರಾವ್, ಎಸ್.ಎಸ್ ಮಲ್ಲಿಕಾರ್ಜುನ್, ಚಲುವರಾಯಸ್ವಾಮಿ, ರಾಮಲಿಂಗಾ ರೆಡ್ಡಿ ಸೇರಿ ಹಲವರು ಪಾಲ್ಗೊಂಡಿದ್ದರು.
ಸಭೆಯ ಬಳಿಕ ಸಚಿವ ಚೆಲುವರಾಯಸ್ವಾಮಿ ಮಾತನಾಡಿ, ಬೈ ಎಲೆಕ್ಷನ್ ಬಗ್ಗೆ ಚರ್ಚಿಸಲಾಗಿದೆ. 3 ಕ್ಷೇತ್ರಗಳನ್ನ ಗೆಲ್ಲಲು ತಯಾರಿ ಮಾಡಿಕೊಳ್ಳುವ ಬಗ್ಗೆ ಚರ್ಚೆಯಾಗಿದೆ. ಚನ್ನಪಟ್ಟಣ ನನಗೆ ಉಸ್ತುವಾರಿ ನೀಡಿದ್ದಾರೆ. ಇನ್ನುಳಿದಂತೆ ಸಂಡೂರು ಕ್ಷೇತ್ರದ ಉಸ್ತುವಾರಿ ಸಚಿವ ಜಮೀರ್‌ಗೆ ಹಾಗೂ ಶಿಗ್ಗಾಂವಿ ಕ್ಷೇತ್ರದ ಉಸ್ತುವಾರಿಯನ್ನು ಸಚಿವ ಈಶ್ವರ್ ಖಂಡ್ರೆಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮ ಅಭ್ಯರ್ಥಿಗಳ ಪಟ್ಟಿ ಮಂಗಳವಾರ ದೆಹಲಿಗೆ ಕಳಿಸಿಕೊಡಲಾಗುತ್ತೆ. ಮಂಗಳವಾರ (ಅ.21) ಸಂಜೆ ಅಭ್ಯರ್ಥಿಗಳ ಹೆಸರು ಫೈನಲ್ ಆಗಬಹುದು. ಸಂಡೂರು ವಿಧಾನಸಭಾ ಕ್ಷೇತ್ರದಿಂದ ತುಕಾರಾಮ್ ಕುಟುಂಬಕ್ಕೆ ಕೊಡುವುದರ ಬಗ್ಗೆ ಅಂತಿಮವಾಗಿದೆ. ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರದ ಬಗ್ಗೆ ಚರ್ಚಿಸಿ ದೆಹಲಿಗೆ ಪಟ್ಟಿ ಕಳಿಸಲಾಗುತ್ತೆ. ಚನ್ನಪಟ್ಟಣ ಅಭ್ಯರ್ಥಿ ಯಾರು ಅನ್ನೋದರ ಬಗ್ಗೆ ನಿಮಗೂ ಗೋತ್ತು ನಮಗೂ ಗೋತ್ತು ಹೈಕಮಾಂಡ್ ಅಂತಿಮ ತೀರ್ಮಾನ ಮಾಡಲಿದೆ ಎಂದು ಹೇಳಿದ್ದರೆ.