ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಶಾಸಕರ ರಾಜೀನಾಮೆಯಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ತನ್ನ ಅವಧಿಯನ್ನು ಪೂರ್ಣಗೊಳಿಸಬೇಕಾದರೆ ಉಪಚುನಾವಣೆಯಲ್ಲಿ 6 ಕ್ಷೇತ್ರಗಳಲ್ಲಿ ಜಯಗಳಿಸಬೇಕು.
ಹೌದು. ಕರ್ನಾಟಕ ವಿಧಾನಸಭೆಯಲ್ಲಿ ಒಟ್ಟು ಈಗ ಬಿಜೆಪಿಯ ಸಂಖ್ಯಾ ಬಲ 105(ಪಕ್ಷೇತರ ಸೇರಿದರೆ 106) ಇದೆ. ಸರಳ ಬಹುಮತಕ್ಕೆ 112 ಸ್ಥಾನಗಳ ಅವಶ್ಯಕತೆಯಿದೆ. ಹೀಗಾಗಿ 15 ಕ್ಷೇತ್ರಗಳಲ್ಲಿ ನಡೆಯುವ ಉಪಚುನಾವಣೆಯಲ್ಲಿ ಕನಿಷ್ಟ 6 ಕ್ಷೇತ್ರಗಳಲ್ಲಿ ಜಯಗಳಿಸಲೇಬೇಕಾದ ಅನಿವಾರ್ಯತೆಗೆ ಬಿಜೆಪಿ ಸಿಲುಕಿದೆ.
Advertisement
Advertisement
ಒಂದು ವೇಳೆ 6 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲದೇ ಇದ್ದರೆ ರಾಜ್ಯದಲ್ಲಿ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ. ಹೀಗಾಗಿ ಈ ಉಪಚುನಾವಣೆಯ ಮೇಲೆ ಮೂರು ಪಕ್ಷಗಳು ಕಣ್ಣನ್ನು ಇಟ್ಟಿವೆ.
Advertisement
ಸದ್ಯ ವಿಧಾನಸಭೆಯಲ್ಲಿ ಬಿಎಸ್‍ಪಿ 1, ಬಿಜೆಪಿ 105, ಕಾಂಗ್ರೆಸ್ 66, ಜೆಡಿಎಸ್ 34 ಶಾಸಕರ ಬಲಾಬಲವನ್ನು ಹೊಂದಿದೆ. ಅನರ್ಹಗೊಂಡ 17 ಶಾಸಕರ ಪೈಕಿ 15 ಕ್ಷೇತ್ರಗಳಲ್ಲಿ ಅ.21 ರಂದು ಉಪಚುನಾವಣೆ ನಡೆಯಲಿದೆ.
Advertisement
ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಿಗೆ ಅ.21 ರಂದು ಮತದಾನ ನಡೆಯಲಿದ್ದು ಅ.24 ರಂದು ಮತ ಎಣಿಕೆ ನಡೆಯಲಿದೆ.