ಬೆಂಗಳೂರು: 2019ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಕರ್ನಾಟಕದ ಎರಡು ವಿಧಾನಸಭಾ ಮತ್ತು ಮೂರು ಲೋಕಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಲೋಕಸಭಾ ಕ್ಷೇತ್ರಗಳಾದ ಬಳ್ಳಾರಿ, ಶಿವಮೊಗ್ಗ, ಮಂಡ್ಯ ವಿಧಾನಸಭಾ ಕ್ಷೇತ್ರಗಳಾದ ಜಮಖಂಡಿ ಮತ್ತು ರಾಮನಗರಗಳಿಗೆ ಚುನಾವಣೆ ನಡೆಯುತ್ತಿದೆ.
ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ. ಚುನಾವಣೆ ನಡೆಯಲಿರುವ ಐದು ಕ್ಷೇತ್ರಗಳಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. 5 ಕ್ಷೇತ್ರಗಳಲ್ಲಿ ಒಟ್ಟು 6,453 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದ್ದು, 1502 ಸೂಕ್ಷ್ಮ ಮತಗಟ್ಟೆ, ಭದ್ರತೆಗಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ.
Advertisement
ಇದೇ ಮೊದಲ ಬಾರಿಗೆ ವಿಕಲಾಂಗ ಚೇತನರಿಗೆ ಮತಗಟ್ಟೆಗೆ ಕರೆದೊಯ್ಯುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. 9,822 ಮತಯಂತ್ರಗಳ ಜೊತೆಗೆ 8,922 ವಿವಿ ಪ್ಯಾಟ್‍ಗಳ ಬಳಕೆ ಆಗಲಿದೆ. 5 ಕ್ಷೇತ್ರಗಳಲ್ಲಿ ಮಹಿಳೆಯರಿಗೆ 57 ಪಿಂಕ್ ಮತಕೇಂದ್ರ ತೆರೆಯಲಾಗಿದೆ. ಬಳ್ಳಾರಿ, ಶಿವಮೊಗ್ಗ, ಮಂಡ್ಯ, ರಾಮನಗರ, ಜಮಖಂಡಿ ಮತಗಟ್ಟೆಗಳಲ್ಲಿ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv