Latest

ಜಯಾ ಕ್ಷೇತ್ರದಲ್ಲಿ ಹಣದ ಹೊಳೆ – ಅಕ್ರಮ ಬಯಲು ಬೆನ್ನಲ್ಲೇ ಉಪ ಚುನಾವಣೆ ರದ್ದು

Published

on

Share this

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನ ಬಳಿಕ ತೆರವಾಗಿದ್ದ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬುಧವಾರ ನಡೆಯಬೇಕಿದ್ದು, ಆದ್ರೆ ಕೇಂದ್ರ ಚುನಾವಣಾ ಆಯೋಗ ಇದನ್ನು ರದ್ದುಗೊಳಿಸಿದೆ.

ಯಾಕಂದ್ರೆ ಈ ಕ್ಷೇತ್ರದಲ್ಲಿ ಉಪ ಚುನಾವಣೆಗಾಗಿ ಹಣದ ಹೊಳೆಯೇ ಹರಿದಿತ್ತು. ಈ ಸಂಬಂಧ ಮಹತ್ವದ ದಾಖಲೆಗಳು ಸಿಕ್ಕ ಹಿನ್ನೆಲೆಯಲ್ಲಿ ಚುನಾವಣೆಯನ್ನು ರದ್ದುಗೊಳಿಸಲಾಗಿದೆ.

ಶುಕ್ರವಾರವಷ್ಟೇ ಆದಾಯ ತೆರಿಗೆ ಇಲಾಖೆ ಅಣ್ಣಾ ಡಿಎಂಕೆ ಸರ್ಕಾರದ ಆರೋಗ್ಯ ಸಚಿವ ವಿಜಯ್ ಭಾಸ್ಕರ್ ನಿವಾಸ ಮತ್ತು ಕಚೇರಿಗಳಲ್ಲಿ ಶೋಧ ಕೈಗೊಂಡಿತ್ತು. ಈ ವೇಳೆ ಪಕ್ಷದ ಪರವಾಗಿ ಒಬ್ಬೊಬ್ಬ ಮತದಾರನಿಗೆ ತಲಾ 4 ಸಾವಿರ ರೂಪಾಯಿ ಹಂಚಿರುವ ಬಗ್ಗೆ ಸ್ಫೋಟಕ ಮಾಹಿತಿ ಲಭ್ಯವಾಗಿತ್ತು.

ಬರೋಬ್ಬರೀ 89 ಕೋಟಿ ರೂಪಾಯಿಯಷ್ಟು ಹಣವನ್ನು ಚೆಲ್ಲಿದ್ದಾರೆ ಅನ್ನೋದ್ರ ಬಗ್ಗೆ ದಾಖಲೆಗಳು ಲಭ್ಯವಾಗಿದ್ದವು. ಸಚಿವರ ಆಪ್ತರ ಬಳಿಯಿಂದ 5 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಎಲ್ಲಾ ಮಾಹಿತಿಗಳನ್ನು ಪರಿಶೀಲಿಸಿದ ಆಯೋಗ ಉಪ ಚುನಾವಣೆ ರದ್ದು ಮಾಡುವ ನಿರ್ಧಾರ ಕೈಗೊಂಡಿದೆ. ಈ ನಡುವೆ ವಿಚಾರಣೆಗೆ ಹಾಜರಾಗಿ ಖುದ್ದು ವಿವರಣೆ ನೀಡುವಂತೆ ಆದಾಯ ತೆರಿಗೆ ಇಲಾಖೆ ಸಚಿವ ವಿಜಯ್ ಭಾಸ್ಕರ್‍ಗೆ ಸಮನ್ಸ್ ಜಾರಿ ಮಾಡಿದೆ.

ಕ್ಷೇತ್ರದಲ್ಲಿ ವಿವಿಧ ಪಕ್ಷಗಳಿಂದ ಒಟ್ಟು 62 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications