ನವದೆಹಲಿ: ಭದ್ರಾವತಿಯ (Bhadravati) ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (Visvesvaraya Iron and Steel Plant) ಮುಚ್ಚುವ ಕ್ರಮವನ್ನು ಸ್ಥಗಿತಗೊಳಿಸುವಂತೆ ಸಂಸದ ಬಿ.ವೈ ರಾಘವೇಂದ್ರ (BY Raghavendra) ನೇತೃತ್ವದ ನಿಯೋಗ ಭಾರತೀಯ ಉಕ್ಕು ಪ್ರಾಧಿಕಾರದ ನೂತನ ಅಧ್ಯಕ್ಷ ಅಮರೆಂದು ಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದೆ.
ಉಕ್ಕುಸ್ಥಾವರವನ್ನು ಪುನಶ್ಚೇತನಗೊಳಿಸಲು ಅಗತ್ಯ ಬಂಡವಾಳ ಹೂಡುವಂತೆ ಕ್ರಮ ಕೈಗೊಳ್ಳಬೇಕು. ಈ ಮೂಲಕ ವಿಐಎಸ್‍ಎಲ್ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚುವ ನಿರ್ಧಾರವನ್ನು ಕೈ ಬಿಡಬೇಕು. ಸ್ಥಗಿತಗೊಂಡಿರುವ ಎಲ್ಲಾ ಉತ್ಪಾದನಾ ಘಟಕಗಳನ್ನು ಪುನರಾರಂಭಿಸಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ವರ್ಕ್ ಫ್ರಂ ಹೋಮ್ ಸಾಕು, ಆಫೀಸಿಗೆ ಬನ್ನಿ ಎಂದಿದ್ದಕ್ಕೆ ಮಹಿಳಾ ಟೆಕ್ಕಿಗಳು ಸಾಮೂಹಿಕ ರಾಜೀನಾಮೆ!
Advertisement
Advertisement
ಕಳೆದ ಫೆಬ್ರವರಿಯಲ್ಲಿ ಭದ್ರಾವತಿಯ ಕಾರ್ಖಾನೆಯನ್ನು ಮುಚ್ಚುವುದಾಗಿ ಕೇಂದ್ರ ಸರ್ಕಾರ ಅಧಿಕೃತವಾಗಿ ಹೇಳಿತ್ತು. ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಸರ್ಕಾರದಿಂದ ಈ ಪ್ರತಿಕ್ರಿಯೆ ಬಂದಿತ್ತು. ಇದಾದ ಬಳಿಕ ಕೇಂದ್ರದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
Advertisement
Advertisement
ಮನವಿ ಸಲ್ಲಿಸುವ ವೇಳೆ ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್, ವಿಐಎಸ್‍ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜಗದೀಶ್, ಗುತ್ತಿಗೆ ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ್ ಮತ್ತಿತರರು ಹಾಜರಿದ್ದರು. ಇದನ್ನೂ ಓದಿ: ಭದ್ರಾವತಿ VISL ಮುಚ್ಚುತ್ತೇವೆ: ಕೇಂದ್ರದಿಂದ ಅಧಿಕೃತ ಉತ್ತರ