ಶಿವಮೊಗ್ಗ: ನಮ್ಮ ಬದುಕಿಗೆ ಒಂದು ಅರ್ಥ ಸಿಗುವುದು ಉತ್ತಮ ಶಿಕ್ಷಣದಿಂದ ಮಾತ್ರ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೌಲ್ಯಾದಾರಿತ ಶಿಕ್ಷಣ ನೀಡುವ ಕೆಲಸವನ್ನು ಮಾಡುವ ಮೂಲಕ ಜೀವನ ಕಟ್ಟುವ ಕೆಲಸವಾಗುತ್ತಿದೆ ಎಂದು ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ.
Advertisement
ಶಿವಮೊಗ್ಗದ ಆಯನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಪ್ಪ ಹಾಕಿದ ಆಲದ ಮರಕ್ಕೆ ಜೋತು ಬೀಳದೇ, ಸ್ವಂತ ಪರಿಶ್ರಮದಿಂದ ವಿದ್ಯಾರ್ಥಿಗಳು ಕಲಿಯುವ ಆಧುನಿಕ ಅವಕಾಶಗಳಿವೆ. ಪುಸ್ತಕದ ಶಿಕ್ಷಣ ಜೊತೆಗೆ ಸಂಶೋಧನೆಗೆ ಹೆಚ್ಚು ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಅವಕಾಶ ದೊರೆಯಲಿವೆ ಎಂದರು. ಇದನ್ನೂ ಓದಿ: ಪೆಟ್ರೋಲ್ ಬೆಲೆ ಇಳಿಸಿದ್ದು ಭಯದಿಂದ: ಪ್ರಿಯಾಂಕಾ ಗಾಂಧಿ
Advertisement
Advertisement
ಇಡೀ ದೇಶದಲ್ಲಿ ನೂತನ ಶಿಕ್ಷಣ ನೀತಿಯನ್ನು ಜಾರಿ ಮಾಡಿರುವ ರಾಜ್ಯ ನಮ್ಮ ಕರ್ನಾಟಕ. ಇದರಿಂದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಕಲಿಯುವ ಅವಕಾಶವಿದೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಕೆ. ಬಿ. ಅಶೋಕ್ ನಾಯ್ಕ್, ಎಂಎಲ್ ಸಿ ಆಯನೂರು ಮಂಜುನಾಥ್. ರುದ್ರೇಗೌಡ, ಆರ್. ಪ್ರಸನ್ನ ಕುಮಾರ್, ಎಸ್.ಎಲ್. ಬೊಜೇಗೌಡ, ಕಾಲೇಜಿನ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ