ಕಾರವಾರ: ಪಕ್ಷದ ವರಿಷ್ಠರು, ಸಂಘಟನೆಗೆ ಒಪ್ಪಿದರೆ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಪುತ್ರ ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ.
Advertisement
ಇಂದು ಶಿರಸಿ ನಗರದ ಗೋಪಾಲಕೃಷ್ಣ ದೇವಸ್ಥಾನದ ಸಮುದಾಯ ಭವನ ಕಾಮಗಾರಿ ಭೂಮಿಪೂಜೆಗೆ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ನಮ್ಮನ್ನು ಬಿಜೆಪಿ ಬೆಳೆಸಿದೆ. ಪಕ್ಷ ಎಂದಿಗೂ ನಮಗೆ ತಾಯಿಯಂತೆ, ವರಿಷ್ಠರು ಬಯಸಿದರೆ ನಾನು ವಿಧಾನಸಭೆ ಚುನಾವಣೆಗೆ ಸ್ಪರ್ದಿಸಲು ಸಿದ್ದ ಎಂದಿದ್ದಾರೆ.
Advertisement
Advertisement
ಪಕ್ಷವು ಯಡಿಯೂರಪ್ಪ ಅವರನ್ನು ಕಡೆಗಣಿಸುವ ಪ್ರಶ್ನೆಯೆ ಇಲ್ಲ, ಸಂಘಟನೆ ಅವರನ್ನು ಬೆಳಸಿದೆ. ಸಂಘಟನೆ ಹಾಗೂ ಪಕ್ಷದ ಹಿರಿಯ ನಾಯಕರೊಂದಿಗೆ ಪಕ್ಷ ಕಟ್ಟಲು ರಾಜ್ಯಾದ್ಯಂತ ಪ್ರವಾಸ ಮಾಡುತಿದ್ದಾರೆ. ಬೈ ಎಲಕ್ಷನ್‍ನಲ್ಲಿ ಎರಡೂ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಯಡಿಯೂರಪ್ಪನವರ ನೇತ್ರತ್ವದಲ್ಲಿ ಆಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮದುವೆಗಾಗಿ ಮತಾಂತರ ತಪ್ಪು: ಮೋಹನ್ ಭಾಗವತ್
Advertisement
ಯಡಿಯೂರಪ್ಪ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ರಾಜಕೀಯ ಷಡ್ಯಂತ್ರವಲ್ಲ. ಅದು ತನಿಖಾದಳಗಳ ಸಹಜ ಪ್ರಕ್ರಿಯೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪ ಸತ್ಯಕ್ಕೆ ದೂರವಾದದ್ದು, ಉಮೇಶ್, ಯಡಿಯೂರಪ್ಪ ಅವರ ಕಚೇರಿಯಲ್ಲಿ ಹಲವು ವರ್ಷ ಕೆಲಸ ಮಾಡಿದ್ದು ನಿಜ. ಅವರ ತನಿಖೆ ಪಾರದರ್ಶಕವಾಗಿ ನಡೆಯಲಿದೆ. ಆ ಬಳಿಕ ಸತ್ಯಾಸತ್ಯತೆ ಸ್ಪಷ್ಟವಾಗಲಿದೆ ಎಂದರು. ಇದನ್ನೂ ಓದಿ: ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ: ಎಚ್‍ಡಿಕೆ