ಶಿವಮೊಗ್ಗ: ಮತಾಂತರ ನಿಷೇಧ ಕಾಯ್ದೆ ಜಾರಿ ತರುವ ವಿಚಾರವಾಗಿ ಸಿಎಂ ಬೊಮ್ಮಾಯಿ ಅವರ ನಿರ್ಧಾರ ಸರಿಯಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅಭಿಮತ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಂವಿಧಾನದಲ್ಲಿ ಎಲ್ಲರಿಗೂ ಸ್ವತಂತ್ರವಾಗಿ ಅವರ ಧರ್ಮದಲ್ಲಿ ಬದುಕಲು ಅವಕಾಶವಿದೆ. ಆದರೆ ಬಲತ್ಕಾರವಾಗಿ ಮತಾಂತರ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಈ ನಿಟ್ಟಿನಲ್ಲಿ ಬಿಗಿಯಾದ ನಿಲುವು ಬರುವುದು ಸರಿ ಇದೆ ಎಂದು ತಿಳಿಸಿದರು.
Advertisement
Advertisement
ಪದೇ ಪದೇ ಅಲ್ಲೊಂದು, ಇಲ್ಲೊಂದು ಮತಾಂತರ ಪ್ರಕರಣ ಕೇಳಿ ಬರುತ್ತಿದೆ. ಆ ದೃಷ್ಟಿಕೋನ ಇಟ್ಟುಕೊಂಡು ಮತಾಂತರ ಕಾಯ್ದೆಯಲ್ಲಿ ತಿದ್ದುಪಡಿ ತರಲು ಸರ್ಕಾರ ಯೋಚಿಸುತ್ತಿದೆ. ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ಚರ್ಚೆಯಾಗುವ ಸಾಧ್ಯತೆ ಇದೆ ಎಂದು ಗೃಹಸಚಿವರು ಹೇಳಿದ್ದಾರೆ ಎಂದು ತಿಳಿಸಿದರು.
Advertisement
Advertisement
ಈ ವೇಳೆ ಗೋಹತ್ಯೆಗೆ ಸಂಬಂಧಿಸಿ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಕಾಯ್ದೆಗೂ ತಿದ್ದುಪಡಿಯ ಅಗತ್ಯವಿದೆ. ಗೋಹತ್ಯೆ ಪ್ರಕರಣ ದಾಖಲಾದರೂ ಆರೋಪಿಗಳು ಕೆಲವೇ ಗಂಟೆಯಲ್ಲಿ ಹೊರಬರುತ್ತಾರೆ. ಹೀಗಾಗಿ ಕಾಯ್ದೆ ಮತ್ತಷ್ಟು ಬಿಗಿಯಾದರೆ, ಕಾನೂನಿಗೂ ಇನ್ನಷ್ಟು ಗೌರವ ಹೆಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸುದೀಪ್ ಕುಟುಂಬ ಸಮೇತರಾಗಿ ಭೇಟಿ
ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿ ಮಾತನಾಡಿದ ಅವರು, ಪರಿಷತ್ ಚುನಾವಣೆಯಲ್ಲಿ ಅಧಿಕ ಮತಗಳ ಅಂತರದಿಂದ ನಾವು ಗೆಲ್ಲುತ್ತೇವೆ. ಮತದಾರರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಮೊದಲ ಪ್ರಾಶಸ್ತ್ಯದಲ್ಲೇ ಶಿವಮೊಗ್ಗ ಗೆಲುವು ಸಾಧಿಸುತ್ತೇವೆ. ರಾಜ್ಯದಲ್ಲಿ 12- 15 ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದರು. ಇದನ್ನೂ ಓದಿ: ಲಸಿಕೆ ನೀಡುವಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕು ನಂಬರ್ 1