ತುಮಕೂರು: ಅಲ್ಲಾನ (Allah) ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಬಂದಿದೆ. ನಿಮ್ಮ ಆಶೀರ್ವಾದದಿಂದ ನಾನು ಗೃಹಸಚಿವನಾಗಿದ್ದೇನೆ. ಆ ದೇವರ ಆಶೀರ್ವಾದ ಇಲ್ಲದೇ ಇದ್ದರೆ ನಾನು ಶಾಸಕನಾಗುತ್ತಿರಲಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ (G.Parameshwara) ಹೇಳಿದ್ದಾರೆ.
ಗುರುವಾರ ಮುಸ್ಲಿಂ ಭಾಂಧವರ ಬಕ್ರಿದ್ (Bakrid) ಹಬ್ಬದ ಹಿನ್ನೆಲೆಯಲ್ಲಿ ಕೊರಟಗೆರೆ (Koratagere) ಪಟ್ಟಣದ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮುಸ್ಲಿಂ (Muslim) ಬಾಂಧವರಿಗೆ ಶುಭ ಕೋರಿದರು. ಈ ವೇಳೆ ಧಾರ್ಮಿಕ ಮುಖಂಡರು ಪರಮೇಶ್ವರ್ ಅವರಿಗೆ ಟೋಪಿ ಧಾರಣೆ ಮಾಡಿ ಸಿಎಂ ಆಗಲಿ ಎಂದು ಶುಭಹಾರೈಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ವಿಪಕ್ಷ ನಾಯಕರ ಶಕ್ತಿ ಪ್ರದರ್ಶನ – ಜುಲೈ 13, 14ಕ್ಕೆ ಸಭೆ
Advertisement
Advertisement
ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಬಕ್ರಿದ್ ಹಬ್ಬ ತ್ಯಾಗ ಬಲಿದಾನದ ಸಂಕೇತ. ಅಲ್ಲಾ ಬೇರೆ ಬೇರೆ ರೀತಿಯಲ್ಲಿ ಪರೀಕ್ಷೆ ಮಾಡುತ್ತಾನಂತೆ. ತನ್ನ ಮಗನನ್ನೂ ಬಲಿ ಕೊಡಬೇಕು ಎನ್ನುವ ತ್ಯಾಗ ದೊಡ್ಡದು. ರಂಜಾನ್ ವೇಳೆ ಇಲ್ಲಿಗೆ ಬಂದಿದ್ದೆ. ಆಗ ಚುನಾವಣೆ ಇತ್ತು. ಈ ಸಂದರ್ಭ ನಾನು ಬಂದು ಮತ ಕೇಳಿದ್ದೆ. ನನ್ನನ್ನು ಗೆಲ್ಲಿಸಿದ್ದೀರಿ ಎಂದರು. ಇದನ್ನೂ ಓದಿ: ಅಕ್ಕಿಗೆ ಕಲ್ಲು ಹಾಕಿದ್ರಿ, ಈಗ ಹಣ ಕೊಡೋದ್ರಲ್ಲೂ ಜನ್ರ ಮನಸ್ಸು ಕೆಡಿಸ್ಬೇಡಿ: ಹೆಚ್‌ಕೆ ಪಾಟೀಲ್
Advertisement
ಮಹಮ್ಮದ್ ಇಬ್ರಾಹಿಂ ತನ್ನ ಮಗನನ್ನೇ ಅಲ್ಲಾನಿಗೆ ಬಲಿ ಕೊಟ್ಟಿದ್ದ. ಅಂತಹ ಮಹಾನ್ ಬಲಿದಾನದ ಸಂಕೇತ ಬಕ್ರಿದ್. ಎಲ್ಲರಿಗೂ ಶುಭಕಾಮನೆ ಹೇಳಿದ್ದೇನೆ. ಭಾರತ ಶಾಂತಿ ನಂಬಿದ ದೇಶ. ಸಂವಿಧಾನದಲ್ಲೇ ಅದನ್ನು ಅಳವಡಿಸಿಕೊಂಡಿದ್ದೇವೆ ಎಂದರು. ಈ ಬಾರಿಯ ಚುನಾವಣೆಯಲ್ಲಿ (Election) ಕಾಂಗ್ರೆಸ್‌ಗೆ ಮುಸ್ಲಿಂ ಬಾಂಧವರ ಬಹುಪಾಲು ಮತದ ವಿಚಾರವಾಗಿ ಮಾತನಾಡಿದ ಅವರು, ಎಲ್ಲೋ ಒಂದುಕಡೆ ಮುಸ್ಲಿಮರಿಗೆ ಹಿಂದಿನ ಸರ್ಕಾರದಿಂದ ಆತಂಕ ಇತ್ತು. ಭಯದ ವಾತಾವರಣ ಇತ್ತು. ಅದೆಲ್ಲವನ್ನೂ ಬಿಟ್ಟು ಕಾಂಗ್ರೆಸ್‌ಗೆ ಮತಹಾಕಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯಗೆ ನೋಟಿಸ್
Advertisement
ಕಾಂಗ್ರೆಸ್ ಜ್ಯಾತ್ಯಾತೀತ ಪಕ್ಷ. ಹಾಗಾಗಿ ಅವರು ನಮ್ಮ ಜೊತೆ ನಿಂತಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ. ಅಭಿವೃದ್ಧಿಯ ಜೊತೆಗೆ ಶಾಂತಿ ಕಾಪಡಬೇಕಿದೆ. ಗೃಹ ಸಚಿವನಾಗಿ ಶಾಂತಿ ಕಾಪಾಡುವ ಕೆಲಸ ಮಾಡುತ್ತೇನೆ. ದ್ವೇಷ ಸಾಧಿಸಲು ಹೋಗುವುದಿಲ್ಲ ಎಂದು ಭರವಸೆ ನೀಡಿದರು. ಇದನ್ನೂ ಓದಿ: ರಾಜ್ಯದ ಶ್ರೀಮಂತ ದೇವಸ್ಥಾನಗಳ ಪಟ್ಟಿ ಬಿಡುಗಡೆ – ಯಾವ ದೇವಾಲಯದ ಆದಾಯ, ಖರ್ಚು ಎಷ್ಟು?
Web Stories