– ವಾಮಮಾರ್ಗ, ಹಣದ ಹರಿವು; ಸಚಿವ, ಶಾಸಕರಲ್ಲಿ ಕಾಂಗ್ರೆಸ್ ಭಯ ಮೂಡಿಸಿತ್ತು
ಬೆಂಗಳೂರು: ರಾಜ್ಯದಲ್ಲಿ ನಡೆದ 3 ವಿಧಾನಸಭಾ ಉಪಚುನಾವಣೆಯಲ್ಲಿ (By Election) ಬಿಜೆಪಿ (BJP) ಸೋತಿರುವುದಕ್ಕೆ ಕೇವಲ ರಾಜ್ಯಾಧ್ಯಕ್ಷರೊಬ್ಬರೇ ಹೊಣೆಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ (N Ravikumar) ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸೋಲಿಗೆ ಪಕ್ಷವೇ ಜವಾಬ್ದಾರಿ ಹೊರಲಿದೆ. ಪಕ್ಷವು ಇದನ್ನು ಸವಾಲಾಗಿ ತೆಗೆದುಕೊಳ್ಳಲಿದೆ. ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಬೂತ್ ಮಟ್ಟದಿಂದ ಸಂಘಟಿಸಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿಧಾನಸಭಾ ಚುನಾವಣೆ, ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಯತ್ನಾಳ್ ಹರಕು ಬಾಯಿಯೇ ಕಾರಣ: ರೇಣುಕಾಚಾರ್ಯ
- Advertisement
- Advertisement
ಕಾಂಗ್ರೆಸ್ಸಿಗರು ವಾಮಮಾರ್ಗ, ವಕ್ರ ಮಾರ್ಗ, ಹಣವನ್ನು ಹರಿಸುವ ಮೂಲಕ ಜಾತಿ ವಿಷಬೀಜವನ್ನು ಬಿತ್ತಿ, ಅಲ್ಪಸಂಖ್ಯಾತರನ್ನು ಸಂಪೂರ್ಣವಾಗಿ ಒಗ್ಗಟ್ಟು ಮಾಡಿ, ಮುಖ್ಯಮಂತ್ರಿಗಳು ತಾನು ಸಿಎಂ ಆಗಿ 5 ವರ್ಷ ಇರಬೇಕೋ ಬೇಡವೋ ಎಂದು ಮಂತ್ರಿಗಳಿಗೆ, ಶಾಸಕರಿಗೆ ಕೇಳಿ, ಭಯವನ್ನುಂಟು ಮಾಡಿ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಿ ಗೆದ್ದಿದ್ದಾರೆ. ಎನ್‌ಡಿಎ 3 ಸೀಟುಗಳನ್ನು ಸೋತಿದೆ. ಸೋಲಿನ ಅವಲೋಕನ ಮಾಡಿ ಬಿಜೆಪಿಯನ್ನು ಒಂದು ಬಲಿಷ್ಠ ಸಂಘಟನೆಯನ್ನಾಗಿ ರೂಪಿಸಿ ನಾವು ಮುಂದೆ ಅಧಿಕಾರಕ್ಕೆ ಬರುತ್ತೇವೆ ಎಂದರು. ಇದನ್ನೂ ಓದಿ: ಆರ್‌ಸಿಬಿಗೆ ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಹ್ಯಾಜಲ್‌ವುಡ್
ಶಿಗ್ಗಾಂವಿಯಲ್ಲಿ ಅಲ್ಪಸಂಖ್ಯಾತರ ಮತಗಳೂ ಬಹಳ ದೊಡ್ಡ ಪ್ರಮಾಣದಲ್ಲಿ ಇದೆ. ನಮಗೆ ಬರುವ ಮತಗಳು ಸ್ವಲ್ಪ ಮಟ್ಟಿಗೆ ವಿಭಜನೆಯಾಗಿವೆ. ಅದರಲ್ಲಿ ಹಣವನ್ನು ಹರಿಸಿದ್ದಾರೆ, ವಾಮಮಾರ್ಗವಾಗಿ ಕೆಲಸ ಮಾಡಿದ್ದಾರೆ, ಸಚಿವರು ಬೀಡು ಬಿಟ್ಟಿದ್ದಾರೆ, ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬ ಶಾಸಕರನ್ನು ನೇಮಿಸಿದ್ದರು. ಪಕ್ಷ ಎಂದ ಮೇಲೆ ಸಣ್ಣಪುಟ್ಟ ಗೊಂದಲಗಳಿರುತ್ತವೆ. ಇವನ್ನು ನಾವು ಸರಿಪಡಿಸಿ ಬಿಜೆಪಿಯನ್ನು ಕರ್ನಾಟಕದಲ್ಲಿ ಮತ್ತೆ ಪುನಃ ಒಳ್ಳೆಯ ರೀತಿಯಲ್ಲಿ ಕಟ್ಟುತ್ತೇವೆ ಎಂದು ನುಡಿದರು. ಇದನ್ನೂ ಓದಿ: ಮೊಬೈಲ್ ನೋಡ್ತಾ ಮನೆಮುಂದೆ ಕೂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ – 2 ಕಾಲುಗಳು ಕಟ್
ಅಧಿವೇಶನದಲ್ಲಿ ಈ ಸರ್ಕಾರದ ಅಕ್ರಮಗಳು, ಭ್ರಷ್ಟಾಚಾರ, ವಕ್ಫ್ ರಾಕ್ಷಸ ಅವತಾರ ತಾಳಿ ರೈತರ ಜಮೀನುಗಳನ್ನು ವಶಪಡಿಸಿಕೊಳ್ಳುವ ಕೆಲಸ ಮಾಡಿದ್ದನ್ನು ಬಯಲಿಗೆಳೆಯುತ್ತೇವೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳು, ರೈತರಿಗೆ ಪ್ರೋತ್ಸಾಹಧನ ನೀಡದೆ ಇರುವುದು, ಸರ್ಕಾರಿ ನೌಕರರ ಆತ್ಮಹತ್ಯೆ, ರೈತರ ಆತ್ಮಹತ್ಯೆ ಮೊದಲಾದ ಅನೇಕ ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಕಟ್ಟಿ ಹಾಕುವ ಕೆಲಸ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಜಾಮಾ ಮಸೀದಿ ಸರ್ವೇಗೆ ವಿರೋಧ – ಹಿಂಸಾಚಾರದಲ್ಲಿ ಮೂವರು ಸಾವು, 20 ಪೊಲೀಸರಿಗೆ ಗಾಯ