ತುಮಕೂರು: ಹೈಕಮಾಂಡ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತುಂಬಾ ಟೈಟ್ ಮಾಡುತ್ತಿರುವುದು ನಿಜ ಎಂದು ಬಿಎಸ್‍ವೈ ಪುತ್ರ, ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಅವರು ಸ್ಪಷ್ಟಪಡಿಸಿದರು.
ನಗರದ ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮೂರುವರೆ ವರ್ಷ ಅವರೇ ಮುಖ್ಯಮಂತ್ರಿಯಾಗಿರಬೇಕು, ಒಳ್ಳೆಯ ಸರ್ಕಾರ ನೀಡಬೇಕೆಂದು ಬಿಗಿ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ಇನ್ನು ಯಾವುದೇ ರೀತಿಯ ಟೈಟ್ ಯಡಿಯೂರಪ್ಪನವರಿಗೆ ಇಲ್ಲ ಎಂದು ತಿಳಿಸಿದರು.
Advertisement
Advertisement
ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದಗಂಗಾ ಶ್ರೀಗಳ ಕ್ಷೇತ್ರದಲ್ಲಿ ನಿಂತು ಮಾತನಾಡುತಿದ್ದೇನೆ ನಾನು ಯಾವುದೇ ಕಾರಣಕ್ಕೂ ಸಿಎಂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಯಡಿಯೂರಪ್ಪನವರು ಪುಕ್ಸಟ್ಟೆ ಮುಖ್ಯಮಂತ್ರಿ ಆದವರಲ್ಲ. 30-40 ವರ್ಷಗಳ ಹೋರಾಟ ಮಾಡಿ ಸಿಎಂ ಆದವರು. ಹಾಗಾಗಿ ಆ ಸ್ಥಾನದ ಮಹತ್ವ ನನಗೆ ಗೊತ್ತಿದೆ. ಪ್ರತಿ ಪಕ್ಷಗಳ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದರು.
Advertisement
ಕೇಂದ್ರದಿಂದ ನೆರೆ ಪರಿಹಾರ ಬರುವುದು ತಡವಾಗಿದ್ದು ನಿಜ. ಕೇಂದ್ರದಿಂದ ಪರಿಹಾರ ಹಣ ಬಂದಿಲ್ಲ ಎಂದು ಯಾವುದೇ ಕೆಲಸಗಳು ಸ್ಥಗಿತಗೊಂಡಿಲ್ಲ. ರಾಜ್ಯ ಸರ್ಕಾರದಿಂದ ಪರಿಹಾರ ನೀಡಲಾಗುತ್ತಿದೆ ಎಂದು ಇದೇ ವೇಳೆ ತಿಳಿಸಿದರು.
Advertisement
ಬಿಬಿಎಂಪಿ ಮಹಾಪೌರರ ಆಯ್ಕೆ ಬಗ್ಗೆ ಸಿಎಂ ಬಳಿ ನಳಿನ್ ಕುಮಾರ್ ಕಟೀಲ್ ಮಾತುಕತೆ ನಡೆಸಿದ್ದರು. ಈ ವಿಷಯದಲ್ಲಿ ಮುಖ್ಯಮಂತ್ರಿಗಳನ್ನು ಕಡೆಗಣಿಸಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಯಡಿಯೂರಪ್ಪನವರ ಮಾರ್ಗದರ್ಶನದ ಮೇರೆಗೆ ಮೇಯರ್ ಆಯ್ಕೆ ಮಾಡಲಾಗಿದೆ. ಅನರ್ಹ ಶಾಸಕರು ಯಾರು ಕೂಡ ಬಿಜೆಪಿ ಪಕ್ಷ ಸೇರಿಲ್ಲ. ಅನರ್ಹ ಶಾಸಕರು ಬಿಜೆಪಿ ಪಕ್ಷ ಸೇರಲಿದ್ದಾರೆ ಎಂಬ ಪರಿಸ್ಥಿತಿ ನಿರ್ಮಾಣವಾದಾಗ ಸಿಎಂ ಹಾಗೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.