Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂಬರುವ ವಿಧಾನಸಭೆ ಚುನಾವಣೆಗೆ ಬಿವೈವಿ ನೇತೃತ್ವ ಬೇಡ – ರಾಜ್ಯ ಬಿಜೆಪಿ ಉಸ್ತುವಾರಿ ಮುಂದೆ ಭಿನ್ನ ನಾಯಕರ ಅಳಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮುಂಬರುವ ವಿಧಾನಸಭೆ ಚುನಾವಣೆಗೆ ಬಿವೈವಿ ನೇತೃತ್ವ ಬೇಡ – ರಾಜ್ಯ ಬಿಜೆಪಿ ಉಸ್ತುವಾರಿ ಮುಂದೆ ಭಿನ್ನ ನಾಯಕರ ಅಳಲು

Latest

ಮುಂಬರುವ ವಿಧಾನಸಭೆ ಚುನಾವಣೆಗೆ ಬಿವೈವಿ ನೇತೃತ್ವ ಬೇಡ – ರಾಜ್ಯ ಬಿಜೆಪಿ ಉಸ್ತುವಾರಿ ಮುಂದೆ ಭಿನ್ನ ನಾಯಕರ ಅಳಲು

Public TV
Last updated: December 4, 2025 4:22 pm
Public TV
Share
3 Min Read
BY Vijayendra
SHARE

ನವದೆಹಲಿ: ರಾಜ್ಯ ಬಿಜೆಪಿ (BJP) ಅಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ವಿರುದ್ಧ ಸಮರ ಸಾರಿದ್ದ ಭಿನ್ನ ನಾಯಕರು ಈಗ ತಮ್ಮ ಹೋರಾಟದ ದಾರಿಯನ್ನು ಬದಲಿಸಿದ್ದಾರೆ. ಕೂಡಲೇ ಬಿ.ವೈ ವಿಜಯೇಂದ್ರ ಅವರನ್ನು ಬದಲಿಸಲು ಒತ್ತಡ ಹೇರುವ ಬದಲು ಮುಂಬರುವ ವಿಧಾನಸಭೆ ಚುನಾವಣೆಗೆ ಅವರು ನೇತೃತ್ವ ವಹಿಸದಂತೆ ನೋಡಿಕೊಳ್ಳುವ ಪ್ರಯತ್ನ ಆರಂಭಿಸಿದ್ದಾರೆ.

ಕಳೆದ ಮೂರ ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿರುವ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ನೇತೃತ್ವದ ಭಿನ್ನರ ತಂಡ ರಾಜ್ಯ ಬಿಜೆಪಿ ಉಸ್ತುವಾರಿ ರಾಧ ಮೋಹನ್ ದಾಸ್ ಅಗರವಾಲ್, ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ, ವಿ. ಸೋಮಣ್ಣ, ಸಂಸದರಾದ ಬಸವರಾಜ್ ಬೊಮ್ಮಾಯಿ, ಡಾ.ಕೆ ಸುಧಾಕರ್ ಸೇರಿದಂತೆ ಹಲವರನ್ನು ಭೇಟಿ ಮಾಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಜೆಸಿಬಿಗಳ ಘರ್ಜನೆ – 47 ಮನೆಗಳು ನೆಲಸಮ

ಬಿಜೆಪಿ ಪ್ರತ್ಯೇಕ ಬಣದ ನಾಯಕರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ವಿಜಯೇಂದ್ರ ಪಕ್ಷದ ಹೋರಾಟಗಳನ್ನು ಸಮರ್ಪಕವಾಗಿ ನಡೆಸುತ್ತಿಲ್ಲ. ರಾಜ್ಯದ ಪ್ರಸಕ್ತ ಸಮಸ್ಯೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಸಂಘಟನೆ ಬಲಪಡಿಸುವಲ್ಲಿ ವಿಫಲರಾಗಿದ್ದಾರೆ. ಮಾಧ್ಯಮ ಹೇಳಿಕೆಗಳ ಮಟ್ಟಕ್ಕೆ ಮಾತ್ರ ಸೀಮಿತವಾಗಿದ್ದಾರೆ ಎಂದು ರೆಬೆಲ್ ತಂಡ ಹೈಕಮಾಂಡ್ ನಾಯಕರ ಮುಂದೆ ಆಕ್ರೋಶ ವ್ಯಕ್ತಪಡಿಸಿದೆ ಎನ್ನಲಾಗಿದೆ. ಇದನ್ನೂ ಓದಿ: ನಾಳೆಯಿಂದ ಮಂಡ್ಯದಲ್ಲಿ ಅದ್ಧೂರಿ ಕೃಷಿ ಮೇಳ – ಸಿಎಂ ಸಿದ್ದರಾಮಯ್ಯರಿಂದ ಚಾಲನೆ, 5 ಲಕ್ಷ ಜನ ಸೇರುವ ನಿರೀಕ್ಷೆ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಂತರಿಕ ಸಂಘರ್ಷ, ಸಿಎಂ ಬದಲಾವಣೆ ಗೊಂದಲ, ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ಸಮಸ್ಯೆ ಇತ್ಯಾದಿ ಪ್ರಮುಖ ಸಮಸ್ಯೆಗಳ ವಿರುದ್ಧ ರಾಜ್ಯ ಘಟಕ ಸಮರ್ಪಕ ಹೋರಾಟ ನಡೆಸಿಲ್ಲ ಎಂದು ಪ್ರತ್ಯೇಕ ಬಣದ ನಾಯಕರು ಹೇಳಿದ್ದಾರೆ. ಇದನ್ನೂ ಓದಿ: ಇಂಡಿಗೋಗೆ ಮಾತ್ರ ಯಾಕೆ ಸಮಸ್ಯೆ? ಹೊಸ ನಿಯಮಗಳು ಏನು?

ಈಗಾಗಲೇ ಎರಡು ವರ್ಷ ಬಿ.ವೈ ವಿಜಯೇಂದ್ರ ಪೂರ್ಣಗೊಳಿಸಿದ್ದು, ಇನ್ನೊಂದು ವರ್ಷದ ಅವಧಿ ಬಾಕಿ ಉಳಿದಿದೆ. ಮುಂದೆ ಪಂಚರಾಜ್ಯಗಳ ಚುನಾವಣೆ ಆರಂಭವಾಗುವ ಹಿನ್ನಲೆ ಬದಲಾವಣೆ ಸಾಧ್ಯತೆ ಮಂದವಾಗಿವೆ. ಈ ಹಿನ್ನಲೆ ಕೂಡಲೇ ಬದಲಾವಣೆಗೆ ಒತ್ತಡ ಹೇರುವ ಬದಲು ಮುಂಬರುವ ಚುನಾವಣೆ ಸಂದರ್ಭಕ್ಕೆ ಅವರ ಅವಧಿಯನ್ನು ಹೆಚ್ಚಿಸಬಹುದಾದ ಹೈಕಮಾಂಡ್ ನಿರ್ಧಾರವನ್ನು ಬದಲಿಸಬೇಕು ಮತ್ತು ವಿಜಯೇಂದ್ರ ಚುನಾವಣೆವರೆಗೂ ಮುಂದುವರಿಯದಂತೆ ನೋಡಿಕೊಳ್ಳುವ ಲೆಕ್ಕಚಾರ ಹಾಕಿಕೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ: ಮದೀನಾ, ಹೈದರಾಬಾದ್ ಇಂಡಿಗೋ ವಿಮಾನಕ್ಕೆ ಬಾಂಬ್‌ ಬೆದರಿಕೆ – ಅಹಮದಾಬಾದ್‌ನಲ್ಲಿ ತುರ್ತು ಭೂಸ್ಪರ್ಶ

ಇನ್ನು ದೆಹಲಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಹೋರಾಟದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರತ್ಯೇಕ ಬಣದ ನಾಯಕ ಕುಮಾರ್ ಬಂಗಾರಪ್ಪ, ಅದು ಕಳೆದ ಒಂದೂವರೆ ವರ್ಷದಿಂದ ನಡೆಯುತ್ತಿದೆ. ಅದರ ಬಗ್ಗೆ ಪದೇಪದೆ ಮಾತಾಡುವ ಕೆಲಸಕ್ಕೆ ಹೋಗಿಲ್ಲ. ನಾವು ಪ್ರಸ್ತುತ ರಾಜಕೀಯದತ್ತ ಗಮನ ಹರಿಸುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಸಿಬ್ಬಂದಿಯ ಸಮಸ್ಯೆಗಳ ಬಗ್ಗೆ ಕೇಂದ್ರದ ಮುಂದಿಟ್ಟ ಕೆ.ಸುಧಾಕರ್

ಸಂಘಟನೆಯನ್ನು ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಬಲಪಡಿಸಬೇಕು ಎಂದು ಅಮಿತ್ ಶಾ ಸೂಚನೆ ಇದೆ. ನಿಮ್ಮ ಬೂತ್ ಅನ್ನು ಬಲಪಡಿಸಿ, ನಿಮ್ಮ ಮಂಡಲವನ್ನು ಸಿದ್ಧಪಡಿಸಿಕೊಳ್ಳಿ. ರಾಷ್ಟ್ರ ನಿರ್ಮಾಣಕ್ಕೆ ಮಂಡಲ ಮತ್ತು ಬೂತ್ ಮುಖ್ಯವೇ ಹೊರತು, ರಾಷ್ಟ್ರದ ರಾಜಕಾರಣವಲ್ಲ ಎಂದು ಶಾ ಹೇಳಿರುವುದಾಗಿ ಕುಮಾರ್ ಬಂಗಾರಪ್ಪ ಉಲ್ಲೇಖಿಸಿದ್ದಾರೆ. ಪಕ್ಷವು ಇದೇ ತತ್ವವನ್ನು ಅನುಸರಿಸುತ್ತಿದ್ದು, ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ಕಾರ್ಪೊರೇಷನ್ ಚುನಾವಣೆಗಳಿಗೆ ಬೂತ್ ಮಟ್ಟದಲ್ಲಿ ಸಿದ್ಧತೆ ನಡೆಸುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಮೊಬೈಲ್, ಎಲೆಕ್ಟ್ರಾನಿಕ್ಸ್ ಬಿಡಿಭಾಗ ತಯಾರಿಕೆಗೆ ವಿಷನ್ ಡಾಕ್ಯುಮೆಂಟ್: ಎಂ.ಬಿ ಪಾಟೀಲ್

TAGGED:assembly electionbjpBY VijayendraNew Delhiramesh jarkiholiನವದೆಹಲಿಬಿಜೆಪಿಬಿವೈ ವಿಜಯೇಂದ್ರರಮೇಶ್ ಜಾರಕಿಹೊಳಿವಿಧಾನಸಭೆ ಚುನಾವಣೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
7 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?