– ಸಿಎಂ, ಡಿಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು; ಬಿವೈವಿ ಆಗ್ರಹ
ಬೆಂಗಳೂರು: ಮತಗಳ್ಳತನ ಆರೋಪ ಮಾಡಿರುವ ರಾಹುಲ್ ಗಾಂಧಿಗೆ (Rahul Gandhi) ಧ್ವನಿಗೂಡಿಸಿರುವ ಸಿಎಂ, ಡಿಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರ ಎನ್ನುವಂತೆ ಆಗಿದೆ ಕಾಂಗ್ರೆಸ್ ಸ್ಥಿತಿ. ಸೋಲಿನ ಹತಾಶೆಯಿಂದ ರಾಹುಲ್ ಗಾಂಧಿ ಚುನಾವಣಾ ಆಯೋಗದ ಬಗ್ಗೆ ಮಾತಾಡ್ತಾ ಇದ್ದಾರೆ. ಕರ್ನಾಟಕ ಚುನಾವಣೆಯಲ್ಲಿ (Karnataka Election) ಅಕ್ರಮ ಆಗಿದೆ ಎಂದು ಹೇಳಿದ್ದಾರೆ. ಅದಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕೂಡ ಧ್ವನಿಗೂಡಿಸಿದ್ದಾರೆ. ಇದಕ್ಕೆ ಸಿದ್ದರಾಮಯ್ಯ, ಡಿಕೆಶಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ವಿಶ್ವವಿದ್ಯಾಲಯದ ಸಮಸ್ಯೆಗಳನ್ನ ಪರಿಹಾರ ಮಾಡಿ: ಛಲವಾದಿ ನಾರಾಯಣಸ್ವಾಮಿ
ಕಾಂಗ್ರೆಸ್ ನಾಯಕರ ತುರ್ತು ಪರಿಸ್ಥಿತಿ ಮೈಂಡ್ ಸೆಟ್ ಬದಲಾಗಿಲ್ಲ. ಇದು ಅಪಾಯಕಾರಿ ಯೋಚನೆ. ಚುನಾವಣೆ ಅಕ್ರಮ ಲೋಕಸಭಾ ಚುನಾವಣೆಯಲ್ಲಿ ಆಗಿದ್ದರೆ,ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆಲ್ಲುತ್ತಿತ್ತು? ಸಿದ್ದರಾಮಯ್ಯ ಹೇಗೆ ಸಿಎಂ ಆದ್ರು? ಬೈ ಎಲೆಕ್ಷನ್‌ಲ್ಲಿ ಹೇಗೆ ಗೆದ್ರು? ಎಂದು ಪ್ರಶ್ನಿಸಿದ್ದಾರೆ.