– ಸಿದ್ದರಾಮಯ್ಯ ಬೆತ್ತಲಾಗಿದ್ದಾರೆ ಎಂದು ಶಾಸಕ ಲೇವಡಿ
– ನಾಳೆ ಬಿಜೆಪಿ ಶಾಸಕರು, ಸಂಸದರಿಂದ ಪ್ರತಿಭಟನೆ
ಬೆಂಗಳೂರು: ಮುಡಾ ಪ್ರಕರಣ (MUDA Case) ಬಗ್ಗೆ ಇಡೀ ದೇಶ ಮಾತನಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಬೆತ್ತಲಾಗಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ಕೊಡ್ತೀವಿ ಅಂತ ಅಧಿಕಾರಕ್ಕೆ ಬಂದು, ಒಂದೇ ವರ್ಷದಲ್ಲಿ ಇಷ್ಟೆಲ್ಲ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ. ಸಿಎಂ ಅಧಿಕಾರದಲ್ಲಿರುವಾಗ ಲೋಕಾಯುಕ್ತ ಪ್ರಾಮಾಣಿಕ ತನಿಖೆ ನಡೆಸಲು ಸಾಧ್ಯವೇ? ಆದ್ದರಿಂದ ಕೂಡಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಶಾಸಕರೂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ರಾಜ್ಯ ಹೈಕೋರ್ಟ್ (Karnataka High Court) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶವನ್ನು ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿತ್ತು. ಇದಾದ ಬೆನ್ನಲ್ಲೇ ಬುಧವಾರ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತ ಪೊಲೀಸರಿಂದ (Mysuru Lokayukta Police) ತನಿಖೆಗೆ ಆದೇಶ ನೀಡಿತು. ಈ ಕುರಿತು ರಾಜ್ಯ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಪಡೆದರೆ ಇಡೀ ದಕ್ಷಿಣ ಭಾರತ ಹೊತ್ತಿ ಉರಿಯುತ್ತೆ: ಅಹಿಂದ ರಾಜ್ಯಾಧ್ಯಕ್ಷ
ಹೈಕೋರ್ಟ್‌ನಿಂದ ತೀರ್ಪು ಹೊರಬಂದಿದ್ದರೂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಲ್ಲ ಅಂದಿದ್ದಾರೆ. ಆರೋಪಗಳು ಬಂದಿದ್ದರೂ ಏಕೆ ರಾಜೀನಾಮೆ ಕೊಡಬೇಕು ಅಂದಿದ್ದಾರೆ. ಈ ಹಿಂದೆ ಯಡಿಯೂರಪ್ಪ ಅವರ ಮೇಲೆ ಆರೋಪ ಕೇಳಿಬಂದಾಗ ಸಿದ್ದರಾಮಯ್ಯ ವಿಪಕ್ಷ ನಾಯಕ ಆಗಿದ್ರು, ಆಗ ಏನು ಹೇಳಿದ್ರು ಅಂತ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: MUDA Scam| ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ
ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಲಿ:
ಬಿಜೆಪಿಯು ಇಂತಹ ಭ್ರಷ್ಟ ಸರ್ಕಾರ, ಭ್ರಷ್ಟ ಸಿಎಂ ವಿರುದ್ಧ ನಿರಂತರ ಹೋರಾಟ ಮಾಡ್ಕೊಂಡು ಬಂದಿದೆ, ಪಾದಯಾತ್ರೆ ನಡೆಸಿದೆ. ಇದರ ಪರಿಣಾಮ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರು. ಹೈಕೋರ್ಟ್ ಸಹ ತನಿಖೆ ನಡೆಸಿ ಅಂದಿದೆ. ಈಗ ಜನಪ್ರತಿನಿಧಿಗಳ ಕೋರ್ಟ್ ಸಹ ತನಿಖೆ ಮಾಡಲು ಮೈಸೂರು ಲೋಕಾಯುಕ್ತ ಪೊಲೀಸರಿಗೆ ಸೂಚನೆ ಕೊಟ್ಟಿದೆ. ಯಾವ ನಾಯಕನ ವಿರುದ್ಧ ತನಿಖೆಗೆ ಆದೇಶ ಆಗಿದೆಯೋ ಆ ವ್ಯಕ್ತಿ ರಾಜ್ಯದ ಸಿಎಂ. ಇಂಥ ಸಂದರ್ಭದಲ್ಲಿ ಪಾರದರ್ಶಕ ತನಿಖೆ ನಡೆಯುವುದು ಅನುಮಾನ. ಹಾಗಾಗಿ ಕೋರ್ಟ್ ತೀರ್ಪುಗಳನ್ನು ಒಪ್ಪಿಕೊಂಡು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿ. ರಾಜೀನಾಮೆ ಕೊಟ್ಟು ಸಿದ್ದರಾಮಯ್ಯ ತನಿಖೆಗೆ ಸಹಕರಿಸಲಿ ಎಂದು ಒತ್ತಾಯಿಸಿದ್ದಾರೆ.
ಲೋಕಾಯುಕ್ತದಿಂದ ಪ್ರಾಮಾಣಿಕ ತನಿಖೆ ಸಾಧ್ಯವೇ?
ಸಿಎಂ ವಿರುದ್ಧವೇ ಆರೋಪ ಕೇಳಿಬಂದಾಗ ಲೋಕಾಯುಕ್ತ ಪೊಲೀಸರಿಂದ ಪ್ರಾಮಾಣಿಕ ತನಿಖೆ ಮಾಡಲು ಸಾಧ್ಯವೇ? ಲೋಕಾಯುಕ್ತ ಪೊಲೀಸರಿಂದ ನ್ಯಾಯಬದ್ಧ ತನಿಖೆ ಅಸಾಧ್ಯ. ಕೋರ್ಟ್ ಆದೇಶ ಮಾಡಿರಬಹುದು, ಆದರೆ ತನಿಖೆ ಪಾರದರ್ಶಕ ಆಗುತ್ತಾ? ಹೀಗಾಗಿ ಸಿದ್ದರಾಮಯ್ಯ ಅವರು ಸಿಬಿಐಗೆ ಮುಡಾ ಪ್ರಕರಣ ವಹಿಸಬೇಕು. ಸ್ವತಂತ್ರ ತನಿಖಾ ಸಂಸ್ಥೆಯಿಂದಲೇ ಮುಡಾ ಪ್ರಕರಣ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ತನಿಖೆ ಎದುರಿಸಲು ಸಿದ್ಧನಿದ್ದೇನೆ: ಕೋರ್ಟ್ ಆದೇಶಕ್ಕೆ ಸಿಎಂ ಪ್ರತಿಕ್ರಿಯೆ
ಭ್ರಷ್ಟಾಚಾರಕ್ಕೆ ಸಾಥ್ ಕೊಡ್ತಿದ್ದಾರೆ ಎಂದರ್ಥವೇ?
ಸಿದ್ದರಾಮಯ್ಯನವರು ನನ್ನ ಜೊತೆ ಪಕ್ಷ ಇದೆ, ಶಾಸಕರು ಇದ್ದಾರೆ ಅಂತಿದ್ದಾರೆ. ಅದು ನಿಜವಾದ್ರೆ ಭ್ರಷ್ಟಾಚಾರಕ್ಕೆ ಅವರ ಪಕ್ಷದವರು ಸಾಥ್ ಕೊಡ್ತಿದ್ದಾರೆ ಎಂದು ಅರ್ಥವೇ? ಸಿದ್ದರಾಮಯ್ಯ ತಡಮಾಡದೇ ಸಿಬಿಐ ತನಿಖೆಗೆ ಆದೇಶ ಮಾಡಬೇಕು. ತಕ್ಷಣ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೇನಾಮೆ ಕೊಡಬೇಕು. ಅದಕ್ಕಾಗಿ ಗುರುವಾರ (ಸೆ.26) ಬಿಜೆಪಿ ಶಾಸಕರು, ಸಂಸದರು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದಿದ್ದಾರೆ.
ಯಡಿಯೂರಪ್ಪ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸದ್ಯ ಪ್ರಿಯಾಂಕ್ ಖರ್ಗೆ ಸಿಎಂ ಆಗೋ ಕನಸು ಕಾಣ್ತಿದ್ದಾರೆ. ಅವರ ಮಾತಿಗೆ ಅಷ್ಟೊಂದು ಆದ್ಯತೆ ಯಾಕೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಬೇಕು – ಹರಿಯಾಣ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಮೋದಿ ಆಗ್ರಹ