ಬೆಂಗಳೂರು: ಪೆಟ್ರೋಲ್ ಬೆಲೆ ಲೀಟರ್‌ಗೆ 3 ರೂ., ಡೀಸೆಲ್ ಬೆಲೆ 3.5 ರೂ. ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಸರ್ಕಾರ ಕೈಗೊಂಡಿದೆ. ಏರಿಸಿದ ದರ ಹಿಂಪಡೆಯುವವರೆಗೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಘೋಷಣೆ ಮಾಡಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ ತಮ್ಮ ನೇತೃತ್ವದಲ್ಲಿ ಇಂದು ಸ್ವಾತಂತ್ರ್ಯ ಉದ್ಯಾನವನದ ಬಳಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಅವರು ಮಾತನಾಡಿದರು. ನಾವು ವಿಪಕ್ಷವಾಗಿ ಜನರ ಪರವಾಗಿ ಧ್ವನಿ ಎತ್ತಬೇಕಿದೆ. ರಾಜ್ಯದ ರೈತರು, ಬಡವರು, ಜನಸಾಮಾನ್ಯರಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಾವು ನೀವೆಲ್ಲರೂ ಸೇರಿ ಮಾಡಬೇಕಿದೆ ಎಂದು ತಿಳಿಸಿದರು.
Advertisement
ಧಿಕ್ಕಾರ, ಧಿಕ್ಕಾರ… ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ !
ಜನರಿಗೆ ನೀಡಿದ ಗ್ಯಾರಂಟಿಗಳನ್ನು ಈಡೇರಿಸುವುದಕ್ಕಾಗಿ ಪೆಟ್ರೋಲ್-ಡಿಸೇಲ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಮೇಲೆ ಬರೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ… pic.twitter.com/QHJIESILGK
— BJP Karnataka (@BJP4Karnataka) June 17, 2024
Advertisement
ಜನವಿರೋಧಿ ಸರ್ಕಾರ ಮತ್ತು ಜನವಿರೋಧಿ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಹೋರಾಟ ಕೈಗೆತ್ತಿಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿ 18ರಿಂದ 20 ಸ್ಥಾನ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದ ಕಾಂಗ್ರೆಸ್ ಮುಖಂಡರು ಫಲಿತಾಂಶ ಬಂದ ಬಳಿಕ ಹತಾಶರಾಗಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಶಾಸಕರೇ ಗ್ಯಾರಂಟಿ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದ ಅವರು, ವಿರೋಧ ಪಕ್ಷದಲ್ಲಿ ಇದ್ದಾಗ ಸಿದ್ದರಾಮಯ್ಯನವರಿಗೆ ಇದ್ದ ಜನಪರ ಕಾಳಜಿ ಮುಖ್ಯಮಂತ್ರಿಗಳಾದ ಬಳಿಕ ಎಲ್ಲಿ ಕಳೆದುಹೋಗಿದೆ ಎಂದು ಪ್ರಶ್ನಿಸಿದರು.
Advertisement
Advertisement
ಕಾಂಗ್ರೆಸ್ (Congress) ಸರ್ಕಾರಕ್ಕೆ ಕಳೆದ ಒಂದು ವರ್ಷದ ಅಧಿಕಾರದಲ್ಲಿ ಒಂದೇ ಒಂದು ರೂಪಾಯಿಯನ್ನೂ ಅಭಿವೃದ್ಧಿಗೆ ಕೊಡಲು ಸಾಧ್ಯವಾಗಿಲ್ಲ. ಮುದ್ದೇಬಿಹಾಳದ ಕಾಂಗ್ರೆಸ್ ಶಾಸಕ ನಾಡಗೌಡರು ಅಭಿವೃದ್ಧಿ ಕಾರ್ಯ ಸ್ಥಗಿತವಾದ ಕುರಿತು ಹೇಳಿಕೆ ಕೊಟ್ಟಿದ್ದಾರೆ. ತಾವು ಕ್ಷೇತ್ರದಲ್ಲಿ ತಲೆ ಎತ್ತಿ ಓಡಾಡಲೂ ಆಗದ ಸ್ಥಿತಿ ಬಂದಿದೆ ಅಂತ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲೂ ಸಿದ್ಧ ಎಂದು ಹೇಳಿರುವುದಾಗಿ ಗಮನ ಸೆಳೆದರು. ರಸ್ತೆ, ಶಾಲೆಗಳ ಅಭಿವೃದ್ಧಿ, ಆಸ್ಪತ್ರೆಗಳ ವಿಚಾರದಲ್ಲೂ ಅಭಿವೃದ್ಧಿ ಎಂಬುದು ಕನಸಾಗಿದೆ ಎಂದು ಟೀಕಿಸಿದರು. ಇದನ್ನೂ ಓದಿ: ದರ್ಶನ್ ಗ್ಯಾಂಗ್ ಅಂದರ್ – ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್
ಬಿಜೆಪಿ (BJP) ಸರ್ಕಾರ ಇದ್ದಾಗ ಬಸವರಾಜ ಬೊಮ್ಮಾಯಿಯವರು (Basavaraj Bommai) ಮುಖ್ಯಮಂತ್ರಿ ಸ್ಥಾನದಿಂದ ಇಳಿಯುವಾಗ ರಾಜ್ಯದಲ್ಲಿ ಕಂದಾಯ ಮಿಗತೆ ಇತ್ತು. ಹೆಚ್ಚು ಸಾಲಗಳೂ ಇರಲಿಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ಒಂದೇ ಒಂದು ವರ್ಷದಲ್ಲಿ ಕರ್ನಾಟಕ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ರಾಜ್ಯ ದಿವಾಳಿ ಅಂಚಿಗೆ ಹೋಗಿದೆ. ಹಾಗಿದ್ದರೆ ಯಾವ ಪುರುಷಾರ್ಥಕ್ಕೆ ಆಡಳಿತ ನಡೆಸುತ್ತಿದ್ದೀರಿ ಎಂದು ಪ್ರಶ್ನಿಸಿದರು. ಬೆಲೆ ಏರಿಕೆ, ಹಣದುಬ್ಬರದ ಕುರಿತು ತಿಳಿದಿದ್ದರೂ ಅನುಭವಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು (Siddaramaiah) ಲೋಕಸಭಾ ಚುನಾವಣೆ (Loksabha Elections 2024) ನಂತರ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಈ ಜನವಿರೋಧಿ ನಿರ್ಧಾರ ಮಾಡಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿದರು.